ಬಸ್‌ ಮುಷ್ಕರ | ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಅಟೋ ಸಂಚಾರಕ್ಕೆ ಅನುಮತಿಗೆ ಮನವಿ

April 7, 2021
12:21 PM

ಕೆ ಎಸ್‌ ಆರ್‌ ಟಿ ಸಿ ಬಸ್‌ ಸಿಬಂದಿಗಳ ಮುಷ್ಕರದಿಂದಾಗಿ ಪ್ರಯಾಣಿಕರು ಹಾಗೂ ಕೃಷಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಾರಿಗೆ ವ್ಯವಸ್ಥೆ ಸುಗಮವಾಗಲು ಹಾಗೂ ಕೆ ಎಸ್‌ ಆರ್‌ ಟಿ ಸಿ ಸಿಬಂದಿಗಳ ಮುಷ್ಕರ ಮುಗಿಯುವವರೆಗೆ ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಅಟೋ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಬಿ ಎಂ ಎಸ್‌ ಅಟೋ ವಿಭಾಗದ  ಸುಳ್ಯ ತಾಲೂಕಿನ ಗುತ್ತಿಗಾರು ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಕಡೋಡಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. 

ಚಂದ್ರಶೇಖರ ಕಡೋಡಿ

 

ಕಳೆದ ಬಾರಿಯೂ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾದಾಗ ಬಿ ಎಂ ಎಸ್‌ ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಅವರು ಅಟೋಗಳಿಗೆ ಎಲ್ಲಾ ತಾಲೂಕುಗಳಿಗೆ ಸಂಚಾರಕ್ಕೆ ಮುಷ್ಕರ ಮುಗಿಯುವವರೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರಲ್ಲದೆ, ಕೆಲವು ಪ್ರದೇಶಗಳಿಗೆ ಸೇವಾ ದೃಷ್ಟಿಯಿಂದ  ಉಚಿತವಾಗಿ ಪ್ರಯಾಣಿಕರನ್ನು ಕರೆದೊಯ್ಯುವ ಬಗ್ಗೆಯೂ ಈ ಹಿಂದೆ ಯೋಜನೆ ಮಾಡಿದ್ದರು. ಇದೀಗ ಮತ್ತೆ ಕೆ ಎಸ್‌ ಆರ್‌ ಟಿ ಸಿ ಸಿಬಂದಿಗಳ ಮುಷ್ಕರದಿಂದ ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಅಟೋಗಳನ್ನು ಬಳಕೆ ಮಾಡಬಹುದು  ಎಂಬುದು  ಚಂದ್ರಶೇಖರ್‌ ಅವರ ಯೋಜನೆಯಾಗಿದೆ. ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬಹುದಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror