ಕೆ ಎಸ್ ಆರ್ ಟಿ ಸಿ ಬಸ್ ಸಿಬಂದಿಗಳ ಮುಷ್ಕರದಿಂದಾಗಿ ಪ್ರಯಾಣಿಕರು ಹಾಗೂ ಕೃಷಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಾರಿಗೆ ವ್ಯವಸ್ಥೆ ಸುಗಮವಾಗಲು ಹಾಗೂ ಕೆ ಎಸ್ ಆರ್ ಟಿ ಸಿ ಸಿಬಂದಿಗಳ ಮುಷ್ಕರ ಮುಗಿಯುವವರೆಗೆ ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಅಟೋ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಬಿ ಎಂ ಎಸ್ ಅಟೋ ವಿಭಾಗದ ಸುಳ್ಯ ತಾಲೂಕಿನ ಗುತ್ತಿಗಾರು ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಕಡೋಡಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕಳೆದ ಬಾರಿಯೂ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾದಾಗ ಬಿ ಎಂ ಎಸ್ ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಅವರು ಅಟೋಗಳಿಗೆ ಎಲ್ಲಾ ತಾಲೂಕುಗಳಿಗೆ ಸಂಚಾರಕ್ಕೆ ಮುಷ್ಕರ ಮುಗಿಯುವವರೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರಲ್ಲದೆ, ಕೆಲವು ಪ್ರದೇಶಗಳಿಗೆ ಸೇವಾ ದೃಷ್ಟಿಯಿಂದ ಉಚಿತವಾಗಿ ಪ್ರಯಾಣಿಕರನ್ನು ಕರೆದೊಯ್ಯುವ ಬಗ್ಗೆಯೂ ಈ ಹಿಂದೆ ಯೋಜನೆ ಮಾಡಿದ್ದರು. ಇದೀಗ ಮತ್ತೆ ಕೆ ಎಸ್ ಆರ್ ಟಿ ಸಿ ಸಿಬಂದಿಗಳ ಮುಷ್ಕರದಿಂದ ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಅಟೋಗಳನ್ನು ಬಳಕೆ ಮಾಡಬಹುದು ಎಂಬುದು ಚಂದ್ರಶೇಖರ್ ಅವರ ಯೋಜನೆಯಾಗಿದೆ. ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬಹುದಾಗಿದೆ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…