ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನೂತನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಸಂದರ್ಭಗಳಲ್ಲಿ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ. ಇಂಥಹ ಸಂದರ್ಭಗಳಲ್ಲಿ ಸಂಸ್ಥೆಯ ಲಾಭಕ್ಕಿಂತ ಜನರಿಗೆ ಅನುಕೂಲವಾಗುವುದು ಮುಖ್ಯ ಎಂದು ಹೇಳಿದ್ದಾರೆ. ದಸರಾ ಸಂದರ್ಭದಲ್ಲಿ ಹೆಚ್ಚುವರಿಯಾಗಿ 2300 ಬಸ್ ಗಳ ಸೇವೆ ನೀಡಲಾಗಿತ್ತು. ಇದೀಗ ಮತ್ತೆ 900 ಹೊಸ ಬಸ್ ಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

