ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ ಅಕ್ಟೋಬರ್ 3 ರಿಂದ 14 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ವಿಶೇಷ ಕಾರ್ಯಕ್ರಮವಾಗಿ ಅಕ್ಟೋಬರ್ 6ರಂದು ನಗರದಲ್ಲಿ ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ. 2 ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದರು. ದೇಶ ಹಾಗೂ ತುಳುನಾಡಿನ ಸಂಸ್ಕೃತಿಗೆ ಅನುಗುಣವಾಗಿ ಸ್ತಬ್ಧಚಿತ್ರಗಳು ಸಿದ್ಧವಾಗುತ್ತಿದ್ದು, ಅಕ್ಟೋಬರ್ 13ರಂದು ನಡೆಯುವ ದಸರಾ ಮೆರವಣಿಗೆಗೆ ಕಳೆ ಹೆಚ್ಚಿಸಲಿವೆ ಎಂದು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ಮಂಗಳೂರು ದಸರಾ ಮೆರವಣಿಗೆಯಲ್ಲಿ ಡಿಜೆ ಸಂಗೀತ, ನೃತ್ಯಕ್ಕಿಂತ ಧಾರ್ಮಿಕ, ಸಾಂಸ್ಕೃತಿಕ ಪರಂಪರೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದು ದೇವಸ್ಥಾನ ಸಮಿತಿ ನಿರ್ಧರಿಸಿದೆ ಎಂದು ದೇವಸ್ಥಾನ ಆಡಳಿತ ಸಮಿತಿಯ ಪದ್ಮರಾಜ್ ಹೇಳಿದ್ದಾರೆ.