ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

September 30, 2024
8:09 PM

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ ಅಕ್ಟೋಬರ್ 3 ರಿಂದ 14 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ವಿಶೇಷ ಕಾರ್ಯಕ್ರಮವಾಗಿ ಅಕ್ಟೋಬರ್ 6ರಂದು ನಗರದಲ್ಲಿ ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ. 2 ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದರು.  ದೇಶ ಹಾಗೂ ತುಳುನಾಡಿನ ಸಂಸ್ಕೃತಿಗೆ ಅನುಗುಣವಾಗಿ ಸ್ತಬ್ಧಚಿತ್ರಗಳು ಸಿದ್ಧವಾಗುತ್ತಿದ್ದು,  ಅಕ್ಟೋಬರ್ 13ರಂದು ನಡೆಯುವ ದಸರಾ ಮೆರವಣಿಗೆಗೆ  ಕಳೆ ಹೆಚ್ಚಿಸಲಿವೆ ಎಂದು ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ  ನವರಾತ್ರಿ ಹಾಗೂ ಮಂಗಳೂರು ದಸರಾ ಮೆರವಣಿಗೆಯಲ್ಲಿ ಡಿಜೆ ಸಂಗೀತ, ನೃತ್ಯಕ್ಕಿಂತ ಧಾರ್ಮಿಕ, ಸಾಂಸ್ಕೃತಿಕ ಪರಂಪರೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದು ದೇವಸ್ಥಾನ ಸಮಿತಿ ನಿರ್ಧರಿಸಿದೆ ಎಂದು ದೇವಸ್ಥಾನ ಆಡಳಿತ ಸಮಿತಿಯ ಪದ್ಮರಾಜ್‌ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror