ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

March 7, 2026
7:23 AM
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ ಘೋಷಣೆ ರಾಜ್ಯ ಬಜೆಟ್‌ನಲ್ಲಿ ಪ್ರಕಟವಾಗಿದೆ. ಯಾತ್ರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸಿ ಧಾರ್ಮಿಕ ಪ್ರವಾಸೋದ್ಯಮ ಅಭಿವೃದ್ಧಿ ಮಾಡುವುದು ಇದರ ಉದ್ದೇಶವಾಗಿದೆ.

ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ಮುಜರಾಯಿ ಇಲಾಖೆಯ ವ್ಯಾಪ್ತಿಯ ಎರಡು ಪ್ರಮುಖ ದೇವಾಲಯಗಳಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಐತಿಹಾಸಿಕ ತೀರ್ಮಾನವನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯದಲ್ಲಿರುವ ಕುಕ್ಕೆ ಸುಬ್ರಮಣ್ಯ ಕ್ಷೇತ್ರ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ನಾನಾ ಭಾಗಗಳಿಂದ ವರ್ಷಪೂರ್ತಿ ಸಾವಿರಾರು ಭಕ್ತರು ಆಗಮಿಸುತ್ತಾರೆ. ಭಕ್ತರಿಗೆ ಉತ್ತಮ ಮೂಲಭೂತ ಸೌಲಭ್ಯ ಒದಗಿಸುವುದು, ಯಾತ್ರಿಕರ ವ್ಯವಸ್ಥೆ ಸುಧಾರಿಸುವುದು ಹಾಗೂ ಈ ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸುವುದಾಗಿ ಸರ್ಕಾರ ತಿಳಿಸಿದೆ.

ಈ ಪ್ರಾಧಿಕಾರಗಳ ಮೂಲಕ ದೇವಾಲಯಗಳ ಸುತ್ತಮುತ್ತ ಮೂಲಸೌಕರ್ಯ ಅಭಿವೃದ್ಧಿ, ಯಾತ್ರಿಕರಿಗೆ ವಸತಿ ವ್ಯವಸ್ಥೆ, ಸಂಚಾರ ವ್ಯವಸ್ಥೆ ಸುಧಾರಣೆ, ಪಾರ್ಕಿಂಗ್ ಹಾಗೂ ಸ್ವಚ್ಛತಾ ವ್ಯವಸ್ಥೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತದೆ.

ಇದರೊಂದಿಗೆ, ಕರ್ನಾಟಕದ ಹೊರರಾಜ್ಯಗಳಲ್ಲಿರುವ ಪ್ರಮುಖ ಧಾರ್ಮಿಕ ಕೇಂದ್ರಗಳಿಗೂ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಆಂಧ್ರಪ್ರದೇಶದ ಮಂತ್ರಾಲಯದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರಸ್ತುತ ಶಿಥಿಲಗೊಂಡಿರುವ ಛತ್ರದ ನವೀಕರಣ ಕಾರ್ಯ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ಇದಲ್ಲದೆ, ಆಂಧ್ರಪ್ರದೇಶದ ಶ್ರೀಶೈಲಂ ಕ್ಷೇತ್ರದಲ್ಲಿ ಹೊಸ ಯಾತ್ರಿನಿವಾಸ ನಿರ್ಮಾಣ ಹಾಗೂ ಮಹಾರಾಷ್ಟ್ರದ ತುಳಜಾಪುರ ಕ್ಷೇತ್ರದಲ್ಲಿ ಹೊಸ ಛತ್ರ ನಿರ್ಮಾಣಕ್ಕೆ ಸಹ ಬಜೆಟ್‌ನಲ್ಲಿ ಅನುದಾನ ನೀಡಲಾಗಿದೆ.

ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಹಾಗೂ ಯಾತ್ರಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಜರಾಯಿ ಇಲಾಖೆಗೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka state budget has announced the formation of development authorities for the Kukke Subramanya Temple in Dakshina Kannada district and the Kollur Mookambika Temple in Udupi district. The move aims to improve infrastructure and facilities for pilgrims and promote religious tourism. The budget has also allocated funds for renovation and pilgrim facilities at Mantralaya, Srisailam, and Tuljapur religious centres.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror