ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವದ ಬಳಿಕ ಬುಧವಾರ ಬೆಳಗ್ಗೆ ಕುಮಾರಧಾರಾ ನದಿಯಲ್ಲಿ ಶ್ರೀದೇವರಿಗೆ ನೌಕಾವಿಹಾರ ಹಾಗೂ ಅವಭೃತೋತ್ಸವ ನಡೆಯಿತು.
ದೇವಳದಿಂದ ಬಂಡಿ ರಥದಲ್ಲಿ ಶ್ರೀದೇವರ ಅವಭೃತೋತ್ಸವ ಸವಾರಿ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಪೂಜೆ ನಡೆಸಲಾಯಿತು. ತದನಂತರ ಕುಮಾರಧಾರಾ ನದಿ ತಟದವರೆಗೆ ಸಾಗಿಬಂದು ನದಿಯಲ್ಲಿ ತಳಿರು ತೋರಣ ಮತ್ತು ಹೂವುಗಳಿಂದ ಸಿಂಗರಿಸಲ್ಪಟ್ಟ ತೆಪ್ಪದಲ್ಲಿ ನೌಕಾವಿಹಾರ ನಡೆಯಿತು. ಬಳಿಕ ಅವಭೃತೋತ್ಸವ ನಡೆಯಿತು. ಶ್ರೀ ಕ್ಷೇತ್ರದ ಆನೆ ಯಶಸ್ವಿಯು ನದಿನೀರಿನಲ್ಲಿ ಜಲಕ್ರೀಡೆಯಾಡಿ ಸಂಭ್ರಮಿಸಿತು. ನೂರಾರು ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…