Advertisement
MIRROR FOCUS

ಕುಕ್ಕೆ ಸುಬ್ರಹ್ಮಣ್ಯ | ನದಿಗೆ ಪ್ಲಾಸ್ಟಿಕ್‌ ಎಸೆಯಬೇಡಿ…| ದಂಡ ಕಟ್ಟಲು ಸಿದ್ಧರಾಗಿ…! | ತ್ಯಾಜ್ಯ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಪಂಚಾಯತ್‌ |

Share

ಕುಕ್ಕೆ ಸುಬ್ರಹ್ಮಣ್ಯ ಪವಿತ್ರ ನಾಗಕ್ಷೇತ್ರ. ನಾಡಿನ ವಿವಿದೆಡೆಯಿಂದ ಭಕ್ತಾದಿಗಳು ಆಗಮಿಸುತ್ತಾರೆ. ನದಿ ಸೇರಿದಂತೆ ಆಸುಪಾಸಿನಲ್ಲಿ ಪ್ಲಾಸ್ಟಿಕ್‌ ಸೇರಿದಂತೆ ಮಲಿನ ಹೆಚ್ಚಾಗುತ್ತಿದೆ. ಪ್ಲಾಸ್ಟಿಕ್‌ ಎಸೆಯದಂತೆ, ಮಲಿನ ಮಾಡದಂತೆ ಜಾಗೃತಿ ಮಾಡುತ್ತಿದ್ದರೂ ಭಕ್ತಾದಿಗಳಿಗೆ ಅರ್ಥವೇ ಆಗುತ್ತಿಲ್ಲ. ಈಚೆಗಷ್ಟೇ ಲೋಡು ಗಟ್ಟಲೆ ಪ್ಲಾಸ್ಟಿಕ್‌ ಸಂಗ್ರಹ ಮಾಡಲಾಗಿತ್ತು. ಹಾಗಿದ್ದರೂ ಮತ್ತೆ ಪ್ಲಾಸ್ಟಿಕ್‌ ಎಸೆಯುವುದರ ವಿರುದ್ಧ ಕ್ರಮವಾಗಬೇಕಿದೆ. ಇದೀಗ ದಂಡ ವಿಧಿಸುವ ಮೂಲಕ ತ್ಯಾಜ್ಯ ಎಸೆಯುವದನ್ನು ತಡೆಯಲು ಸುಬ್ರಹ್ಮಣ್ಯ ಗ್ರಾಪಂ ಮುಂದಾಗಿದೆ. 

ಕುಕ್ಕೆ ಸುಬ್ರಹ್ಮಣ್ಯದ ಸವಾರಿ ಮಂಟಪ ಬಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳನ್ನು ದರ್ಪಣ ತೀರ್ಥ ನದಿಗೆ ಎಸೆಯುತ್ತಿರುವುದನ್ನು ಪತ್ತೆ ಮಾಡಿದ ಪಂಚಾಯತ್‌ ಸಿಬಂದಿಗಳು ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.ಮುಂದಿನ ದಿನಗಳಲ್ಲಿ ಈ ರೀತಿಯಾಗಿ ನದಿಗೆ, ರಸ್ತೆಯಲ್ಲಿ, ಹಾಗೂ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಸೇರಿದಂತೆ ಎಲ್ಲಾ ರೀತಿಯ ತ್ಯಾಜ್ಯ ಗಳನ್ನು ಎಸೆಯುವುದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪಂಚಾಯತ್‌ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಹಲವು ಸಮಯಗಳ ಹಿಂದೆಯೇ ಇಂತಹದ್ದೊಂದು ಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಕೈಗೊಳ್ಳಬೇಕಾಗಿತ್ತು. ಈಗಲಾದರೂ ದಂಡದ ಮೂಲಕ ಎಚ್ಚರಿಕೆಯನ್ನು ನೀಡುತ್ತಿದೆ. ರಾಜ್ಯದ ವಿವಿದೆಡೆಯಿಂದ ಸಾಕಷ್ಟು ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯಮಟ್ಟದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯ ಇದೆ.  ಸುಬ್ರಹ್ಮಣ್ಯದ ಸ್ವಚ್ಛತೆ ಅತೀ ಅಗತ್ಯವಾಗಿದೆ, ನದಿ ಹಾಗೂ ಸುಬ್ರಹ್ಮಣ್ಯದ ಆಸುಪಾಸುಗಳಲ್ಲಿ  ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಪ್ರತೀ ನಾಗರಿಕರ ಜವಾಬ್ದಾರಿ ಇದಾಗಿದೆ. ಸ್ವಚ್ಛತೆಯ ಬಗ್ಗೆ ಸುಬ್ರಹ್ಮಣ್ಯದ ಪ್ರತೀ ವಸತಿಗೃಹದಲ್ಲಿ ಅರಿವು ಮೂಡಿಸುವ ಫಲಕಗಳ ಅಳವಡಿಕೆ ಹಾಗೂ ತ್ಯಾಜ್ಯ, ಪ್ಲಾಸ್ಟಿಕ್‌ ಎಸೆದರೆ, ನದಿ ಮಲಿನ ಮಾಡಿದರೆ ದಂಡ ವಿಧಿಸುವ ಬಗ್ಗೆ ತಿಳುವಳಿಕೆ ನೀಡುವ ಮೂಲಕ ಸ್ವಚ್ಛತೆಯ ಹೆಜ್ಜೆ ಇಡಬೇಕಾಗಿದೆ.

Kukke Subrahmanya, renowned as a famous Nagakshetra, attracts devotees from all over the country who come to seek blessings. Unfortunately, the influx of visitors has led to an increase in pollution, including plastic waste, in the surrounding areas and the river. Despite ongoing awareness campaigns urging devotees to refrain from littering and to avoid plastic pollution, many visitors continue to disregard these guidelines. A significant amount of plastic waste was recently collected, underscoring the severity of the issue. In response, the Subrahmanya Gramam Panchayath has taken the commendable step of imposing fines to curb waste dumping and protect the sacred site’s environment.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

8 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago