ಭಾರೀ ಮಳೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ | ಮಣ್ಣಿನಡಿ ಸಿಲುಕಿದ ಮನೆಯವರು | ಭೀಕರ ದುರಂತ |

August 1, 2022
9:46 PM

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸಮೀಪದ ಕಲ್ಲಾಜೆಯಲ್ಲಿ 400 ಮಿಮೀ ಮಳೆಯಾಗಿದೆ. ಇದನ್ನು ಮೇಘಸ್ಫೋಟ ಎಂದೇ ಹೇಳಲಾಗುತ್ತಿದೆ. ಇದೀಗ  ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮನೆ ಮಂದಿ ಮಣ್ಣಿನಡ್ಡಿ ಸಿಲುಕಿದ್ದಾರೆ. ಮಕ್ಕಳು ಸಹಿತ ಮನೆಯಲ್ಲಿ ವಾಸಿಸುತ್ತಿದ್ದರು.

ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ  ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿನ ಕುಶಾಲಪ್ಪ ಎಂಬವರ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಇಬ್ಬರು ಮಕ್ಕಳು ಓರ್ವ ವೃದ್ದೆ ಸಹಿತ ನಾಲ್ಕು ಮಂದಿ ವಾಸಿಸುತ್ತಿದ್ದರು. ಮಕ್ಕಳು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯಲು ಸಾಹಸ ಪಡಲಾಗುತ್ತಿದೆ. ಸ್ಥಳೀಯರು ನಿರಂತರ ಪ್ರಯತ್ನದಲ್ಲಿದ್ದಾರೆ. ಭಾರೀ ಮಳೆಗೆ  ರಸ್ತೆ ಬ್ಲಾಕ್‌ ಆಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ಧಾವಿಸಲು ಅಡ್ಡಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ
March 16, 2026
3:26 PM
by: ಸಾಯಿಶೇಖರ್ ಕರಿಕಳ
ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ
March 16, 2026
7:13 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ
March 16, 2026
7:06 AM
by: ಮಿರರ್‌ ಡೆಸ್ಕ್
ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ
March 15, 2026
10:00 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror