#NagaraPanchami | ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ | ಕುಕ್ಕೆ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ಕ್ಷೇತ್ರದಲ್ಲಿ ವಿಶೇಷ ಪೂಜೆ | ಭಕ್ತಸಾಗರ

August 21, 2023
5:16 PM
ಇಂದು ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ. ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ನಾಡಿದ ನಾಗ ಬನಗಳಲ್ಲಿ ವಿಶೇಷ ಪೂಜೆ ನಡೆದವು.

ಇಂದು ನಾಡಿನಾದ್ಯಂತ ನಾಗರ ಪಂಚಮಮಿ ಸಂಭ್ರಮ. ಕರಾವಳಿ ಭಾಗದಲ್ಲಿ ಇನ್ನೂ ವಿಶೇಷವಾಗಿ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ #KukkeSubrahmanya ದೇವಸ್ಥಾನ, ಮಂಗಳೂರಿನ ಕುಡುಪು #Kudupu ಶ್ರೀ ಅನಂತಪದ್ಮನಾಭ ದೇವಸ್ಥಾನ  ಸೇರಿದಂತೆ ಸೋಮವಾರ ಎಲ್ಲಾ ನಾಗಾಲಯಗಳಲ್ಲಿ ಶ್ರದ್ಧಾ ಭಕ್ತಿಯ ನಾಗರಪಂಚಮಿಯನ್ನು #NagaraPanchami ಆಚರಿಸಲಾಯಿತು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ
ಪುತ್ತೂರಿನಲ್ಲಿ

ತುಳುನಾಡಿನಲ್ಲಿ ನಾಗರ ಪಂಚಮಿಯ ಸಡಗರ ಸಂಭ್ರಮ ಮನೆ ಮಾಡಿದೆ. ಪರಶುರಾಮನ ಸೃಷ್ಟಿಯಾದ ತುಳುನಾಡಿನಲ್ಲಿ ನಾಗಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಈ ಹಬ್ಬ ಪ್ರಕೃತಿ ಪೂಜೆಯ ಸಂಕೇತವಾಗಿದ್ದು, ಸಂತಾನ ಅಭಿವೃದ್ಧಿ, ಕೌಟುಂಬಿಕ ನೆಮ್ಮದಿಗಾಗಿ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೃಹತ್ ಮರಗಳ ನಡುವೆ, ದಟ್ಟ ಕಾನನದಲ್ಲಿ ಬನಗಳಲ್ಲಿರುವ ನಾಗರ ಕಲ್ಲಿಗೆ ಪೂಜೆ ಮಾಡುವುದು ತುಳುನಾಡಿನ ಸಂಪ್ರದಾಯ.

ಹಾಲು ಮತ್ತು ಎಳನೀರಿನ ಅಭಿಷೇಕದ ಮೂಲಕ ತನು ಅರ್ಪಿಸುವುದರಿಂದ ನಾಗಬ್ರಹ್ಮ ತೃಪ್ತನಾಗುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಮಕ್ಕಳಾಗದವರು  ನಾಗನಿಗೆವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ. ನಾಗ ಪೂಜೆಯಿಂದಾಗಿ ಕುಟುಂಬದ ನೆಮ್ಮದಿ ಮತ್ತು ಐಶ್ವರ್ಯ ವೃದ್ಧಿಯೂ ಆಗುತ್ತದೆ ಎನ್ನುವುದು ನಂಬಿಕೆ. ತುಳುನಾಡಿನಲ್ಲಿ ನಾಗರಪಂಚಮಿಯ ಮೂಲಕ ಹಬ್ಬಗಳು ಆರಂಭಗೊಳ್ಳುತ್ತವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror