ಕುಕ್ಕೆ ಸುಬ್ರಹ್ಮಣ್ಯ – ತಿರುಪತಿ | ಕೆಎಸ್‌ಆರ್‌ಟಿಸಿ ಬಸ್ಸು ಸೇವೆ ಆರಂಭ |

March 26, 2022
9:55 PM

ಎರಡು ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಸುಬ್ರಹ್ಮಣ್ಯ- ತಿರುಪತಿ  ಸಂಪರ್ಕಿಸಲು ಕೆ ಎಸ್‌ ಆರ್‌ ಟಿ ಸಿ ಬಸ್ಸು ಸೇವೆ ಶನಿವಾರ ಸಂಜೆ ಆರಂಭಗೊಂಡಿದೆ. ಸಚಿವ ಎಸ್‌ ಅಂಗಾರ ಬಸ್ಸು ಸೇವೆಯನ್ನು ಉದ್ಘಾಟಿಸಿದರು. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ದಿ ವಿಭಾಗದ ಪುತ್ತೂರು ಉಪ ವಿಭಾಗದ ಧರ್ಮಸ್ಥಳ ಡಿಪೋದ ವತಿಯಿಂದ ಈ ಸೇವೆ ಆರಂಭಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ-ತಿರುಪತಿ ಬಸ್ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡಲಿದೆ. ಬೆಳಗ್ಗೆ 4.30 ಗಂಟೆಗೆ ಗೆ ಬೆಂಗಳೂರು ತಲುಪಲಿದೆ.ಅಲ್ಲಿಂದ 5 ಗಂಟೆಗೆ ಹೊರಟು 10.30 ಗಂಟೆಗೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡಲಿದೆ.ಅಲ್ಲಿಂದ ಬೆಂಗಳೂರು ಮೂಲಕ ಬೆಳಗ್ಗೆ 5 ಗಂಟೆಗೆ ಸುಬ್ರಹ್ಮಣ್ಯ ತಲುಪಲಿದೆ.ಬಸ್‌ನಲ್ಲಿ ಇಬ್ಬರು ಚಾಲಕರು ಇರಲಿದ್ದಾರೆ.

ಬಸ್ಸು ಸೇವೆ ಉದ್ಘಾಟಿಸಿದ ಸಚಿವ ಎಸ್‌ ಅಂಗಾರ, ಎರಡು ಪುಣ್ಯ ಕ್ಷೇತ್ರಗಳ ಸಂಪರ್ಕದ ಈ ಬಸ್ಸು ಸೇವೆಯನ್ನು ಎಲ್ಲರೂ ಬಳಸಿಕೊಳ್ಳಬೇಕು, ಯಾತ್ರಾ ಕ್ಷೇತ್ರಗಳಿಗೆ ನೇರವಾಗಿ ಪ್ರಯಾಣ ಬೆಳೆಸಲು ಬಸ್ ವ್ಯವಸ್ಥೆ ಬೇಕು ಎಂದು ಭಕ್ತರು ಬೇಡಿಕೆ ಇರಿಸಿದ್ದರು ಎಂದರು.

ಪುರೋಹಿತ ಪ್ರಸನ್ನ ಹೊಳ್ಳ ವೈದಿಕ ವಿದಿ ವಿಧಾನಗಳ ಮೂಲಕ ಬಸ್‌ಗೆ ಪೂಜೆ ನೆರವೇರಿಸಿದರು. ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಪುತ್ತೂರು ವಿಭಾಗೀಯ ಸಂಚಾರಾಧಿಕಾರಿ ಮುರಳೀಧರ ಆಚಾರ್,ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಗುಡಿಗಾರ್, ಕಾರ್ಮಿಕ ಕಲ್ಯಾಣಾಧಿಕಾರಿ ಪ್ರಕಾಶ್, ಸಂಚಾರ ನಿಯಂತ್ರಕರಾದ ಗೋಪಾಲಕೃಷ್ಣ ಎಡಮಂಗಲ,  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಶೋಭಾ ಗಿರಿಧರ್, ಗ್ರಾ.ಪಂ.ಸದಸ್ಯೆ ಭಾರತಿ ದಿನೇಶ್ ಮೊದಲಾದವರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror