ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ-ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ

December 5, 2020
1:02 PM

ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.

Advertisement
Advertisement
Advertisement

ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.

Advertisement

ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. ವಿದ್ಯಾರ್ಥಿಗಳಿಗೂ ಕಾಲೇಜಿಗೆ ಬರುವ ಆತ್ಮವಿಶ್ವಾಸ ಮೂಡುವುದು ಮುಖ್ಯ, ಎಂದರು. ಇದೇ ವೇಳೆ ಅವರು ಅತಿಥಿ ಉಪನ್ಯಾಸಕರುಗಳ ನೇಮಕಾತಿ ಪಟ್ಟಿಯನ್ನು ಇದೇ ವಾರಾಂತ್ಯಕ್ಕೆ ಬಿಡುಗಡೆ ಮಾಡುವ ಭರವಸೆ ನೀಡಿದರು.

ಭವ್ಯ ಇತಿಹಾಸವಿರುವ ವಿವಿ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಮಂಗಳೂರು ವಿಶ್ವವಿದ್ಯಾನಿಲಯ ಎಲ್ಲಾ ಅಗತ್ಯ ನೆರವು ನೀಡಲಿದೆ. ಆದರೆ ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಳ್ಳುವುದು ಅಗತ್ಯ ಎಂದರು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮೊದಲಾದ ವಿಷಯಗಳ ಕುರಿತು ಗಮನಹರಿಸುವಂತೆ ಸಲಹೆ ನೀಡಿದರು.

Advertisement

ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ, ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ | ತಿರುಚಿದ ವರದಿ ಪ್ರಕಟಿಸಿದ WHO | ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೊ ಒತ್ತಾಯ |
November 26, 2024
7:05 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror