ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾದಲ್ಲಿ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ | ಶೋಧ ಕಾರ್ಯ ಆರಂಭ |

August 22, 2022
10:11 AM

ಪುಣ್ಯಕ್ಷೇತ್ರ ದರ್ಶನಕ್ಕೆ ಬಂದಿದ್ದ ಯುವಕರ ತಂಡದಲ್ಲಿದ್ದ ಯುವಕನೊಬ್ಬ ಭಾನುವಾರ ಸಂಜೆ ಕುಮಾರಧಾರಾ ನದಿ ನೀರಿನಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿದ್ದ. ಇದೀಗ ಶೋಧ ಕಾರ್ಯ ಆರಂಭವಾಗಿದೆ. ಕುಮಾರಧಾರಾ ನದಿಯಲ್ಲಿ  ಮುಳುಗು ತಜ್ಞರು ಹಾಗೂ ಅಗ್ನಿಶಾಮಕದ ದಳದ ಸಿಬಂದಿಗಳು , ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಪತ್ತೆಯಾದ ಯುವಕ ಬೆಂಗಳೂರು ದೀಪಾಂಜಲಿ ನಗರದಲ್ಲಿ ವಾಸಿಸುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ಶಿವು(25) ಎಂದು ಗುರುತಿಸಲಾಗಿದೆ.

ಭಾನುವಾರ ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ತೆರಳುವ ಸಂದರ್ಭ ಕುಮಾರಧಾರಾ ನದಿಗೆ ತೆರಳಿದ್ದರು. ಈ ಸಂದರ್ಭ ಶಿವು ಅವರು  ಸ್ನಾನ ಮಾಡಲು ನದಿಗೆ ಹಾರಿದ್ದರು. ಈಜು ಬರುತ್ತಿದ್ದರೂ ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಸ್ಥಳೀಯರು ಹೇಳಿದ್ದಾರೆ. ಹೀಗಾಗಿ ನದಿಯಲ್ಲಿ ಹುಡುಕಾಟ ಆರಂಭವಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ
ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು
March 17, 2025
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror