ಪುಣ್ಯಕ್ಷೇತ್ರ ದರ್ಶನಕ್ಕೆ ಬಂದಿದ್ದ ಯುವಕರ ತಂಡದಲ್ಲಿದ್ದ ಯುವಕನೊಬ್ಬ ಭಾನುವಾರ ಸಂಜೆ ಕುಮಾರಧಾರಾ ನದಿ ನೀರಿನಲ್ಲಿ ಸ್ನಾನಕ್ಕೆ ಇಳಿದು ನಾಪತ್ತೆಯಾಗಿದ್ದ. ಇದೀಗ ಶೋಧ ಕಾರ್ಯ ಆರಂಭವಾಗಿದೆ. ಕುಮಾರಧಾರಾ ನದಿಯಲ್ಲಿ ಮುಳುಗು ತಜ್ಞರು ಹಾಗೂ ಅಗ್ನಿಶಾಮಕದ ದಳದ ಸಿಬಂದಿಗಳು , ಪೊಲೀಸ್ ಇಲಾಖೆ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಪತ್ತೆಯಾದ ಯುವಕ ಬೆಂಗಳೂರು ದೀಪಾಂಜಲಿ ನಗರದಲ್ಲಿ ವಾಸಿಸುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ಶಿವು(25) ಎಂದು ಗುರುತಿಸಲಾಗಿದೆ.
ಭಾನುವಾರ ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ತೆರಳುವ ಸಂದರ್ಭ ಕುಮಾರಧಾರಾ ನದಿಗೆ ತೆರಳಿದ್ದರು. ಈ ಸಂದರ್ಭ ಶಿವು ಅವರು ಸ್ನಾನ ಮಾಡಲು ನದಿಗೆ ಹಾರಿದ್ದರು. ಈಜು ಬರುತ್ತಿದ್ದರೂ ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಸ್ಥಳೀಯರು ಹೇಳಿದ್ದಾರೆ. ಹೀಗಾಗಿ ನದಿಯಲ್ಲಿ ಹುಡುಕಾಟ ಆರಂಭವಾಗಿದೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…