ದ ಕ ಜಿಲ್ಲೆಯಲ್ಲಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದ ಜೀವವೈವಿಧ್ಯ ಮಂಡಳಿ

October 6, 2020
9:48 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ ನದಿಗಳಲ್ಲಿ ಜೀವವೈವಿಧ್ಯ ಮಂಡಳಿ 5 ಸ್ಥಳಗಳನ್ನು ಮತ್ಸ್ಯ ತಾಣ ಎಂದು ಗುರುತಿಸಿದೆ. ಮೀನುಗಾರಿಕೆ ಇಲಾಖೆ ಸಹಕಾರದಲ್ಲಿ ಈ ಸ್ಥಳಗಳಲ್ಲಿ ಅಪರೂಪದ ಮೀನು ವೈವಿಧ್ಯ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ  ತಿಳಿಸಿದ್ದಾರೆ.

Advertisement
Advertisement
Advertisement

ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಪ್ರವಾಸ ಕೈಗೊಂಡ ಬಳಿಕ ಈ ಮಾಹಿತಿ ನೀಡಿದ್ದಾರೆ. ದ ಕ ಜಿಲ್ಲೆಯಲ್ಲಿ  ಪ್ರವಾಸ ಮಾಡಿದ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ , 2 ಗಾಂಧೀ ಜಯಂತಿ ದಿನದಿಂದ 3 ದಿನ ಕಾಲ ಕುಮಾರಧಾರಾ ನದಿ ಸಂರಕ್ಷಣಾ ಅಭಿಯಾನದ  ನೇತೃತ್ವ ವಹಿಸಿದ್ದರು.ಕರ್ನಾಟಕ ಜೀವವೈವಿಧ್ಯ ಮಂಡಳಿ, ಪಂಚಾಯತ್ ಜೀವವೈವಿಧ್ಯ ಸಮಿತಿಗಳು, ಅರಣ್ಯ ಇಲಾಖೆ ಇವುಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆದಿತ್ತು.

Advertisement

 

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನದೀಮಾಲಿನ್ಯ ಸಮಸ್ಯೆ ನಿವಾರಣೆ ಬಗ್ಗೆ ನಾಗರೀಕರು, ಪಂಚಾಯತ್, ದೇವಾಲಯ ಆಡಳಿತದ ಜೊತೆ ಸಮಾಲೋಚನಾ ಸಭೆ ನಡೆಸುವುದರೊಂದಿಗೆ ನದಿ ತೀರಕ್ಕೆ ಹಾಗೂ ಭೇಟಿ, ವೃಕ್ಷಾರೋಪಣಾ ಕಾರ್ಯಕ್ರಮಗಳು ನಡೆದವು. ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿಗಳು ಮುಂದಾಗಿ ಮಾಲಿನ್ಯ ತಡೆ ಕ್ರಮ ತ್ವರಿತವಾಗಿ ಜಾರಿ ಮಾಡಲು ಸೂಚಿಸಿದರು. ಹೋಟೆಲ್ ಅಡಿಗೆ ತ್ಯಾಜ್ಯಾದಿಂದ ಬಯೋಗ್ಯಾಸ್ ತಯಾರಿಸಿ, ತ್ಯಾಜ್ಯಾ ಸಮಸ್ಯೆ ನಿವಾರಿಸಿ ಎಂದು ಸುಬ್ರಹ್ಮಣ್ಯದ ಹೋಟೆಲ್ ಉದ್ಯಮಿಗಳಿಗೆ ಹೇಳಿದರು.

ಕುಮಾರಧಾರ ನದಿ ತೀರ ಉರುಂಬಿಯಲ್ಲಿ ರೈತರು ಹಾಗೂ ಪರಿಸರ ಕಾರ್ಯಕರ್ತರ ಜೊತೆ ನದಿ ಪೂಜೆ ಮಾಡಿ ನದಿಗೆ ಬಾಗಿನ ಅರ್ಪಿಸಿದರು. ಉರುಂಬಿ ನದಿ ಪ್ರದೇಶವನ್ನು ಸೂಕ್ಷ್ಮ ಜೀವ ಸಂಕುಲ ತಾಣ ಎಂದು ಕಡಬ ತಾಲೂಕು ಪಂಚಾಯತ್ ಸಮಿತಿ ಸಭೆಯಲ್ಲಿ ಗುರುತಿಸಲಾಯಿತು. ಸುಳ್ಯ ತಾಲ್ಲೂಕು ಮಡಪ್ಪಾಡಿ ಗ್ರಾಮ ಪಂಚಾಯತ್ ಸಮಿತಿ ಸಭೆಯಲ್ಲಿ ತಜ್ಞರ ತಂಡ ಮಾಯಿಲ ಕೋಟೆ ಗುಡ್ಡ ಪ್ರದೇಶಕ್ಕೆ ಸಂರಕ್ಷಣಾ ಕವಚ ತೊಡಿಸಲು ನಿರ್ಧರಿಸಿತು.

Advertisement

ಸುಳ್ಯ ತಾಲೂಕು ಪಂಚಾಯತ್ ಸಮಿತಿ ಸಭೆಯಲ್ಲಿ ನದಿ ಕಣಿವೆಗಳಲ್ಲಿರುವ ಮಿರಿಸ್ವಿಕಾ ಸ್ವಾಂಪ್ಸ್‍ಗಳನ್ನು ಗುರುತಿಸಿ ಸಂರಕ್ಷಣೆ ಮಾಡಲು ನಿರ್ಧರಿಸಲಾಯಿತು. ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರಿ, ಜಿಲ್ಲಾ ಅರಣ್ಯಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಕುಮಾರಧಾರಾ ನೇತ್ರಾವತಿ ನದೀ ಕಣಿವೆಗಳಲ್ಲಿ ಇರುವ ಡೀಮ್ಡ್ ಅರಣ್ಯಗಳ ಸಂರಕ್ಷಣಾ ಯೋಜನೆಯನ್ನು ರೂಪಿಸಿ ಜಾರಿ ಮಾಡಬೇಕು ಎಂದು ಜೀವವೈವಿಧ್ಯ ಮಂಡಳಿ ಅಧ್ಯಕ್ಷರು ಸೂಚನೆ ನೀಡಿದರು.

ನದೀ ಸಂರಕ್ಷಣಾ ಅಭಿಯಾನದಲ್ಲಿ ತಜ್ಞರಾದ  ಪ್ರಸನ್ನ, ಕಾರ್ತಿಕ್, ಡಾ.ದೇವಿ ಪ್ರಸಾದ್, ಡಾ. ಶೆಣೈ, ಪ್ರೊ|| ಸ್ಮಿತಾ, ಡಾ.ರೇವತಿ ಉಪಸ್ಥಿತದ್ದರು.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಅಡಿಕೆ ಕ್ಯಾನ್ಸರ್‌ಕಾರಕವಲ್ಲ | WHO ವರದಿ ಸತ್ಯಕ್ಕೆ ದೂರವಾದುದು | ಅಧ್ಯಯನದ ನೆರವಿಗೆ ಕೇಂದ್ರ ಸರ್ಕಾರಕ್ಕೆ ಮನವಿ | ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿಕೆ |
November 22, 2024
4:02 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror