Advertisement
MIRROR FOCUS

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

Share

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಮೇಲೆ ವನ್ಯಜೀವಿಗಳಿಂದಾಗುತ್ತಿರುವ ಹಾನಿ, ಪ್ರಾಣಾಪಾಯ ಮತ್ತು ಆರ್ಥಿಕ ನಷ್ಟದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು.

ರಾಜ್ಯದ ಅರಣ್ಯ ಅಂಚಿನ ಜಿಲ್ಲೆಗಳಲ್ಲಿ ಆನೆಗಳ ದಾಳಿ ಹೆಚ್ಚುತ್ತಿದ್ದು, ರೈತರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟಾಗುತ್ತಿದೆ. ಬೆಳೆ ಹಾನಿ, ಮನೆಗಳ ನಾಶ ಮತ್ತು ಕೆಲವೆಡೆ ಪ್ರಾಣಹಾನಿಯೂ ಸಂಭವಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದರು. ಹೀಗಾಗಿ ಮಾನವ–ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಕಾರ್ಯಯೋಜನೆ ರೂಪಿಸಬೇಕು, ಆನೆ ಕಾರಿಡಾರ್‌ ಸಮಗ್ರ ನಿರ್ವಹಣೆ ಅಗತ್ಯ, ರೈತರಿಗೆ ತ್ವರಿತ ಪರಿಹಾರ ಹಾಗೂ ರಕ್ಷಣಾ ವ್ಯವಸ್ಥೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅಧಿಕಾರಿಗಳಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿ, ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಶಾಶ್ವತ ಪರಿಹಾರ ಅಗತ್ಯ :  ಮಾನವ–ವನ್ಯಜೀವಿ ಸಂಘರ್ಷವು ಕೇವಲ ಅರಣ್ಯ ಇಲಾಖೆಯ ವಿಷಯವಲ್ಲ. ಇದು ರೈತರ ಜೀವನೋಪಾಯ, ಗ್ರಾಮೀಣ ಸುರಕ್ಷತೆ ಮತ್ತು ಸಾಮಾಜಿಕ ಸ್ಥಿರತೆಗೆ ಸಂಬಂಧಿಸಿದ ದೊಡ್ಡ ಸಮಸ್ಯೆ. ತಜ್ಞರ ಪ್ರಕಾರ, ಅರಣ್ಯ ಪುನರುಜ್ಜೀವನ, ಆನೆ ಕಾರಿಡಾರ್‌ಗಳ ರಕ್ಷಣೆ, ತಂತ್ರಜ್ಞಾನ ಆಧಾರಿತ ಮುನ್ನೆಚ್ಚರಿಕೆ ವ್ಯವಸ್ಥೆ, ರೈತರಿಗೆ ಸಮರ್ಪಕ ಪರಿಹಾರ ಇವು ಸಮಗ್ರವಾಗಿ ಜಾರಿಯಾಗಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

3 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

3 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

14 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

19 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

19 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

19 hours ago