ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |

December 26, 2024
11:28 AM
ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ಅವರ ಸ್ಮೃತಿ ಕಾರ್ಯಕ್ರಮ ಹಾಗೂ ʼಕಲಾ ಶ್ರೀಧರ’ ಸ್ಮೃತಿ-ಕೃತಿಯ ಅನಾವರಣ ನಡೆಯಲಿದೆ.
ಯಕ್ಷಗಾನದ ಹಿರಿಯ ಕಲಾವಿದ, ಶ್ರೀ ಧರ್ಮಸ್ಥಳ ಮೇಳವೊಂದರಲ್ಲೇ ಐದು ದಶಕಕ್ಕೂ ಮಿಕ್ಕಿ ಸೇವೆಗೈದ ಕುಂಬಳೆ ಶ್ರೀಧರ ರಾವ್ ಅವರ ಸ್ಮೃತಿ ಕಾರ್ಯಕ್ರಮವು 2024ರ ದಶಂಬರ 29, ರವಿವಾರ ಕುಂಬಳೆಯಲ್ಲಿ ಜರುಗಲಿದೆ. ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಮಂಟಪದಲ್ಲಿ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ವಿವಿಧ ಕಲಾಪಗಳು ಸಂಪನ್ನವಾಗಲಿವೆ. ಸಂಜೆ ಗಂಟೆ 4ಕ್ಕೆ ಶ್ರೀಎಡನೀರು ಮಠದ  ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಹಾಗೂ ಶ್ರೀಧಾಮ-ಮಾಣಿಲದ  ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಚನದಲ್ಲಿ ‘ಶ್ರೀಧರ ಸ್ಮೃತಿ’ ಕಾರ್ಯಕ್ರಮ ಜರುಗಲಿದೆ.
ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಧರ್ಮಸ್ಥಳ ಎಸ್.ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ  ಡಿ.ಹರ್ಷೇಂದ್ರ ಕುಮಾರ್ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಬಹುಶ್ರುತ ವಿದ್ವಾಂಸ, ಅರ್ಥದಾರಿ ಡಾ.ಎಂ.ಪ್ರಭಾಕರ ಜೋಶಿಯವರು ‘ಶ್ರೀಧರ ಸ್ಮೃತಿ’ಯನ್ನು ಮಾಡಲಿದ್ದಾರೆ.  ಈ ಸಂದರ್ಭದಲ್ಲಿ ಪತ್ರಕರ್ತ, ಕಲಾವಿದ  ನಾ. ಕಾರಂತ ಪೆರಾಜೆ ಇವರ ಸಂಪಾದಕತ್ವದ ‘ಕಲಾ ಶ್ರೀಧರ’ ಸ್ಮೃತಿ-ಕೃತಿಯನ್ನು ಪೂಜನೀಯ ಯತಿದ್ವಯರು ಅನಾವರಣಗೊಳಿಸಲಿದ್ದಾರೆ.
ಪೂರ್ವಾಹ್ನ ಗಂಟೆ 9ಕ್ಕೆ ಶ್ರೀ ಕಣಿಪುರ ಕ್ಷೇತ್ರದ ಪ್ರಧಾನ ಅರ್ಚಕ ವೇ.ಮೂ. ಮಾಧವ ಅಡಿಗ, ಸಾಮಾಜಿಕ ಸೇವಾ ಕಾರ್ಯಕರ್ತ ಹಾಗೂ ಕಲಾಪೋಷಕ ಶ್ರೀ ಮಂಜುನಾಥ ಆಳ್ವ, ಶ್ರೀ ಧರ್ಮಸ್ಥಳ ಮೇಳದ ಭಾಗವತ ಶ್ರೀ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಕಲಾರತ್ನ ಶಂ.ನಾ.ಅಡಿಗ ಇವರ ಉಪಸ್ಥಿತಿಯಲ್ಲಿ ‘ಶ್ರೀಧರ ಸ್ಮೃತಿ’ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.
ಗಂಟೆ 9-30ರಿಂದ ಕುಂಬಳೆ ಶ್ರೀಧರ ರಾವ್ ಅವರ ಪ್ರಧಾನ ಪಾತ್ರಗಳ ನೆನವರಿಕೆಯ ‘ಸಂವಾದದ ತಾಳಮದ್ದಳೆ’ ಹಾಗೂ ‘ಕೃಷ್ಣ ಸಂಧಾನ’ ಆಖ್ಯಾನದ ತಾಳಮದ್ದಳೆ ಜರುಗಲಿದೆ. ಶ್ರೀಗಳಾದ ದಿನೇಶ ಅಮ್ಮಣ್ಣಾಯ, ಪುತ್ತಿಗೆ ರಘುರಾಮ ಹೊಳ್ಳ, ಸಿರಿಬಾಗಿಲು ರಾಮಕೃಷ್ಣ ಮಯ್ಯ (ಭಾಗವತರು), ಲಕ್ಷ್ಮೀಶ ಅಮ್ಮಣ್ಣಾಯ, ಪಿ.ಜಿ.ಜಗನ್ನಿವಾಸ ರಾವ್, ರಾಮಮೂರ್ತಿ ಕುದ್ರೆಕೂಡ್ಲು, ಲವಕುಮಾರ್ ಐಲ (ಮದ್ದಳೆ – ಚೆಂಡೆ); ಡಾ.ಎಂ.ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್, ಸುಣ್ಣಂಬಳ ವಿಶ್ವೇಶ್ವರ ಭಟ್, ಶಂಭು ಶರ್ಮ, ಎಂ.ಕೆ.ರಮೇಶ ಆಚಾರ್ಯ, ವಸಂತ ಗೌಡ ಕಾಯರ್ತಡ್ಕ, ಗೋಪಾಲ ನಾಯಕ್ ಸೂರಂಬೈಲು, ದಿವಾಕರ ಆಚಾರ್ಯ ಗೇರುಕಟ್ಟೆ, ಅಶೋಕ್ ಕುಂಬ್ಳೆ (ಅರ್ಥದಾರಿಗಳು) ಭಾಗವಹಿಸಲಿದ್ದಾರೆ. ಈ ಕಲಾಪವನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಕಾಸರಗೋಡು ಇವರು ಸಂಯೋಜಿಸಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಶ್ರೀ ಮಹಾಲಕ್ಷ್ಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀಧಾಮ, ಮಾಣಿಲ ಇವರಿಂದ  ಸತೀಶ ಪುಣಿಂಚತ್ತಾಯ, ಪೆರ್ಲ ಇವರ ಸಂಯೋಜನೆಯಲ್ಲಿ ‘ಕಂಸವಧೆ’ ಬಯಲಾಟ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನು  ವಿಘ್ನೇಶ್ವರ ಯಕ್ಷಗಾನ ಕಲಾ ಸಂಘ, ನಾರಾಯಣ ಮಂಗಲ, ಕುಂಬಳೆ;  ಶ್ರೀ ಪಾರ್ತಿಸುಬ್ಬ ಯಕ್ಷಗಾನ ಕಲಾ ಸಂಘ, ಶೇಡಿಕಾವು-ಕುಂಬಳೆ ಹಾಗೂ ಕುಂಬಳೆ ಶ್ರೀಧರ ರಾವ್ ಅಭಿಮಾನಿಗಳು ಆಯೋಜಿಸಿದ್ದಾರೆ. ಕಾರ್ಯಕ್ರಮಕ್ಕೆ ಮುಕ್ತ ಸ್ವಾಗತವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಸಂಪರ್ಕ : 94495 66715 ಗೋಪಾಲ್ ಕುಂಬ್ಳೆ

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
February 19, 2025
11:16 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ
ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ
February 19, 2025
7:27 AM
by: The Rural Mirror ಸುದ್ದಿಜಾಲ
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror