ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ ದಿನೇಶ್ ಗುಂಡೂರಾವ್, ಮಂಗನ ಕಾಯಿಲೆಗೆ ಅಗತ್ಯ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಒದಗಿಸಬೇಕು ಎಂದು ಮನವಿ ಮಾಡಿದರು.
ಮೊದಲ ಹಂತದ ಪ್ರಯೋಗದಲ್ಲಿ ಮಂಗನ ಕಾಯಿಲೆಗೆ ಲಸಿಕೆ ನೀಡುವ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಶೀಘ್ರ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕಾ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗ ಲಭ್ಯವಿರಲಿದೆ. ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ICMR ನಿರ್ದೇಶಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅನಿಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಸರ್ಕಾರಿ ಶಾಲಾ-ಕಾಲೇಜು ಮಕ್ಕಳನ್ನು ರಕ್ತಹೀನತೆ ತಪಾಸಣೆಗೊಳಪಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರ ರಕ್ತಹೀನತೆ ಮುಕ್ತ ಭಾರತ್-2.0 ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…