ಮಂಗನ ಕಾಯಿಲೆ ಅಥವಾ ಹಾವು ಕಡಿತದಿಂದ ಮೃತಪಟ್ಟರೆ ಅರಣ್ಯ ಇಲಾಖೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಮಂಗನ ಕಾಯಿಲೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶಿರಸಿ, ಸಿದ್ದಾಪುರ, ಹೊನ್ನಾವರದಲ್ಲಿ ಕಾಯಿಲೆ ಹೆಚ್ಚಾಗುತ್ತಿದೆ. ಈ ಕಾಯಿಲೆ ಪತ್ತೆಗಾಗಿ ಶಿರಸಿಯಲ್ಲಿ ಪ್ರಯೋಗಾಲಯ ಆರಂಭಿಸಲಾಗಿದ್ದು, ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಿರ್ಮಾಣವಾಗಿರುವ ಕೃಷಿ ಇಲಾಖೆಯ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ, ಯಂತ್ರೋಪಕರಣಗಳ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement



