Advertisement
MIRROR FOCUS

ಬೆಂಗಳೂರಿಗೆ ನೀರಿನ ಕೊರತೆ | ಆದರೂ ನೀರಿನ ನಿರ್ವಹಣೆಯಲ್ಲಿ ಬೆಂಗಳೂರು ದೇಶದಲ್ಲೇ ನಂ.2

Share

ನೀರಿಲ್ಲ, ನೀರಿಲ್ಲ.. ಬೆಂಗಳೂರಿನಲ್ಲಿ(Bengaluru) ನೀರಿಲ್ಲ(No water) ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮಳೆ ಬರಲು ಇನ್ನು 2-3 ತಿಂಗಳು ಬಾಕಿ ಇದೆ. ಅಲ್ಲಿ ತನಕ ಬೆಂಗಳೂರಿಗೆ ನೀರಿನ ಕೊರತೆ ತೀವ್ರವಾಗಿ(Water crisis) ಕಾಡಲಿದೆ ಎಂದು ಭಾವಿಸಲಾಗಿದೆ. ಈ ಮಧ್ಯೆಯೂ ನೀರಿನ ನಿರ್ವಹಣೆಯಲ್ಲಿ(Water management) ಬೆಂಗಳೂರು ಟಾಪ್‌ 5 ರಲ್ಲಿ ಸ್ಥಾನ ಪಡೆದಿದೆ. ಬಳಸಿದ ನೀರು ನಿರ್ವಹಣೆಯಲ್ಲಿ ಸೂರತ್‌ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು (Bengaluru Water Crisis) 2ನೇ ಸ್ಥಾನದಲ್ಲಿದೆ. ಥಿಂಕ್ ಟ್ಯಾಂಕ್ ಕೌನ್ಸಿಲ್ ಆನ್ ಎನರ್ಜಿ, ವಾಟರ್ ಆ್ಯಂಡ್ ಎನ್ವಿರಾನ್‌ಮೆಂಟ್‌ ನಡೆಸಿದ ಸರ್ವೇ(Survey) ಈ ಅಂಶ ಬೆಳಕಿಗೆ ಬಂದಿದೆ. ದೇಶದ 10 ರಾಜ್ಯಗಳ ಪೈಕಿ 500 ನಗರಗಳನ್ನು ಸರ್ವೇಗೆ ಒಳಪಡಿಸಲಾಗಿತ್ತು.

ಬಳಸಿದ ನೀರು ನಿರ್ವಹಣೆಯಲ್ಲಿ ಸೂರತ್‌ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಸಂಶೋಧನೆಗಳ ಆಧಾರದಲ್ಲಿ ಸೂರತ್‌ಗೆ 3.32 ಅಂಕಗಳ ಮೂಲಕ ಮೊದಲ ಸ್ಥಾನ ಇದೆ. ಬೆಂಗಳೂರು 5 ಅಂಕಗಳಿಗೆ 3.23 ಅಂಕ ಪಡೆದು 2ನೇ ಸ್ಥಾನದಲ್ಲಿದೆ. ಬಳಸಿದ ನೀರು ಮರುಬಳಕೆ ವಿಚಾರದಲ್ಲಿ ದೇಶದಲ್ಲೇ ಇದು ಗಮನಾರ್ಹ ಸಾಧನೆಯಾಗಿದೆ. ಬೇರೆ ಯಾವ ನಗರಗಳೂ ಕನಿಷ್ಠ 3 ಅಂಕ ಗಳಿಸಿಲ್ಲ.

ಸಂಸ್ಕರಿಸಿದ ಗೃಹ ತ್ಯಾಜ್ಯವನ್ನು ಮರುಬಳಕೆ ಮಾಡಲು ಸಂಸ್ಕರಿಸಿದ ಬಳಸಿದ ನೀರಿನ ನೀತಿಯನ್ನು ಅಳವಡಿಸಿಕೊಂಡಿರುವ 10 ರಾಜ್ಯಗಳು, ಬಳಸಿದ ನೀರಿನ ನಿರ್ವಹಣೆ ಎಂಬ ವಿಷಯಾಧಾರಿತವಾಗಿ ಅಧ್ಯಯನ ನಡೆಸಲಾಗಿತ್ತು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) 2021 ರಲ್ಲಿ ಪ್ರಕಟಿಸಿದ ಇತ್ತೀಚಿನ ರಾಷ್ಟ್ರೀಯ ಮಟ್ಟದ ಒಳಚರಂಡಿ ದಾಸ್ತಾನು ದತ್ತಾಂಶವನ್ನು ಆಧರಿಸಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ.

ಸದ್ಯ ಬೆಂಗಳೂರಿನಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕುಡಿಯಲು ಯೋಗ್ಯವಲ್ಲದ ಉದ್ದೇಶಗಳಿಗೆ (ತೋಟಗಾರಿಕೆ ಮತ್ತು ಕೈಗಾರಿಕೆಗಳಿಗೆ) ಸಂಸ್ಕರಿಸಿದ ನೀರು ಬಳಸಬಹುದಾಗಿದೆ. ಬೆಂಗಳೂರು ಜಲಮಂಡಳಿಯೂ ನೀರಿನ ಮರುಬಳಕೆಯನ್ನು ಉಲ್ಲೇಖಿಸಿತ್ತು.

  • ಅಂತರ್ಜಾಲ ಮಾಹಿತಿ

Bangalore is ranked in the top 5 in water management. While Surat ranks first in water management, Bengaluru (Bengaluru Water Crisis) ranks second. A survey conducted by the think tank Council on Energy, Water and Environment has come to light. 500 cities out of 10 states of the country were included in the survey.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

9 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

13 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

20 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

20 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago