Advertisement
MIRROR FOCUS

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

Share

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ  ದೀದಿ’ ಕೋಲಾರ ಜಿಲ್ಲೆಯಲ್ಲಿ   ಅನುಷ್ಠಾನಗೊಂಡಿದೆ. ಈ ಯೋಜನೆ ಮೂಲಕ  ಕೃಷಿ ಕಾರ್ಮಿಕರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರನ್ನು ಗುರುತಿಸಿ  ಅವರಿಗೆ  ಆರ್ಥಿಕ ಸಹಾಯ ಹಾಗೂ  ವೃತ್ತಿ ತರಬೇತಿ ನೀಡಲಾಗುತ್ತದೆ.

ಮುಳಬಾಗಿಲು ತಾಲೂಕಿನ  ವಿರೂಪಾಕ್ಷಿ  ಗ್ರಾಮದಲ್ಲಿ  ಕೃಷಿ ಸಖಿ ಮತ್ತು ಪಶು ಸಖಿಯರು  ಮೊಬೈಲ್ ಆಪ್ ಮೂಲಕ  ಸಮೀಕ್ಷೆ ನಡೆಸಿದ್ದಾರೆ.  ಮಹಿಳಾ ಸ್ವಸಹಾಯ ಸಂಘದಿಂದ  ಸಾಲ ಪಡೆದು  ತಾವು ಟೈಲರಿಂಗ್  ವೃತ್ತಿ ಕೈಗೊಂಡಿದ್ದು, ಅದರಿಂದ ಆರ್ಥಿಕವಾಗಿಯೂ ದೃಢವಾಗಲು ಸಾಧ್ಯವಾಗುತ್ತಿದೆ ಎನ್ನುತ್ತಾರೆ ಕೋಲಾರದ ಸುಮಿತ್ರಮ್ಮ.

ಏನಿದು ಲಕ್‌ ಪತಿ ದೀದಿ : ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು ಲಕ್ ಪತಿ ದೀದಿ ಯೋಜನೆಯ ಉದ್ದೇಶ. ಮಹಿಳಾ ಸ್ವಯಂ ಸ್ವಸಹಾಯ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವ 9 ಕೋಟಿ ಮಹಿಳೆಯರಿದ್ದಾರೆ. ಸ್ವಸಹಾಯ ಗುಂಪುಗಳ ಸಹಾಯ ಪಡೆದು ಇವರೆಲ್ಲರೂ ಸ್ವಾವಲಂಬಿಗಳಾಗಿ ಬದುಕುತ್ತಿದ್ದಾರೆ. ಈ ಸ್ವಸಹಾಯ ಗುಂಪುಗಳಿಗೆ ಸಂಬಂಧಪಟ್ಟಂತೆ ಮತ್ತು ಇವುಗಳ ಮೂಲಕ ಮಹಿಳೆಯರ ಆದಾಯ ಹೆಚ್ಚಿಸಲು ಲಕ್ ಪತಿ ದೀದಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲಿ ಸ್ವಂತವಾದ ಉದ್ಯಮವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ 1 ಲಕ್ಷ ರೂ.ಗಳಿಂದ ಪ್ರಾರಂಭಿಸಿ ಒಂದು ಕೋಟಿ ರೂಪಾಯಿಗಳ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡಲು ಹೊರಟಿದೆ. ಅದರಲ್ಲೂ ವಿಶೇಷವಾಗಿ 5 ಲಕ್ಷ ರೂ.ಗಳ ವರೆಗೆ ಸುಲಭ ರೂಪದಲ್ಲಿ ಈ ಯೋಜನೆಯ ಮೂಲಕವಾಗಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

ಯೋಜನೆಯ ಉದ್ದೇಶ:  ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶ. ಈ  ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ, ಆರ್ಥಿಕ ಸಾಕ್ಷರತಾ ಕಾರ್ಯಾಗಾರಗಳು.
ಸಣ್ಣ ಉದ್ದಿಮೆಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಗಳು,ಡಿಜಿಟಲ್ ಸಾಕ್ಷರತೆ ಮೊದಲಾದ ಸೌಲಭ್ಯಗಳು ಸಿಗುತ್ತವೆ.

ಈ ಯೋಜನೆಯಿಂದಾಗಿ ಮಹಿಳೆಯರ ಆದಾಯ ಹೆಚ್ಚಳ ಮತ್ತು ಆರ್ಥಿಕ ಸ್ಥಿತಿ ಸುಧಾರಣೆ, ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳ ವೃದ್ಧಿ,  ಮಹಿಳೆಯರ ಸಾಮಾಜಿಕ ಸ್ಥಾನಮಾನ ಹೆಚ್ಚಳ ಸೇರಿದಂತೆ ವಿವಿಧ ಪ್ರಯೋಜನಗಳು ಗ್ರಾಮೀಣ ಭಾಗದಲ್ಲಿ ನಡೆಯುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?

ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…

29 minutes ago

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

10 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

10 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

11 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

11 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

11 hours ago