ಈ ಹಳ್ಳಿಯ ಕೆರೆ ನೀರು ಜಾನುವಾರುಗಳಿಗೆ ಮಾತ್ರ….!

March 25, 2022
10:36 AM

ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ ಜನರು ತಮ್ಮೂರಿನ ಕೆರೆಯ ನೀರನ್ನು ಜಾನುವಾರುಗಳಿಗೆ ಮಾತ್ರ ಮೀಸಲಿಟ್ಟು ಅನ್ಯ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತೀರ್ಮಾನ ಕೈಗೊಂಡಿದ್ದಾರೆ.

ಬಹಳಷ್ಟು ವರ್ಷಗಳ ನಂತರ ಕೆರೆಗಳಲ್ಲಿ ನೀರು ಕಾಣಿಸುತ್ತಿದೆ. ಈ ನೀರನ್ನು ಅನ್ಯಬಳಕೆಗೆ ಉಪಯೋಗಿಸಿದರೆ ಬೇಸಿಗೆಯ ದಿನಗಳಲ್ಲಿ ನೀರಿಗೆ ತೊಂದರೆಯಾಗಬಹುದು. ಗ್ರಾಮದ ಹೆಚ್ಚಿನ ಜನರು ಹೈನುಗಾರಿಕೆಯಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಗ್ರಾಮದಲ್ಲಿರುವ ಜಾನುವಾರುಗಳಿಗೆ ನೀರಿನ ಅಗತ್ಯವಿದ್ದು ಆದ್ದರಿಂದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿದರೆ ಅದರ ಪರಿಣಾಮವನ್ನು ನಾವೇ ಎದುರಿಸಬೇಕಾಗುತ್ತದೆ ಎಂಬುದನ್ನು ಅರಿತು ಇಂತಹದೊಂದು ಕ್ರಮ ಕೈಗೊಂಡಿದ್ದಾರೆ.

ಈ ಹಿಂದೆ ಬರಗಾಲ ಕಾಡಿದಾಗ ಗ್ರಾಮದ ಕೆರೆಯಲ್ಲಿ ನೀರು ಇಲ್ಲದೆ ಜಾನುವಾರುಗಳನ್ನು ಸಾಕಲಾಗದೆ ಜನರು ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸಬಾರದು ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಸಾರ್ವಜನಿಕರ ತಿಳುವಳಿಕೆಗಾಗಿ ಕೆರೆಯ ಮುಂಭಾಗದ ದಡದಲ್ಲಿ ನಾಮಫಲಕ ಅಳವಡಿಸಿ ಅದರಲ್ಲಿ ಕೆರೆಯ ನೀರನ್ನು ಜಾನುವಾರಗಳ ಉಪಯೋಗಕ್ಕೆ ಬಿಟ್ಟು ಅನ್ಯ ಕಾರಣಗಳಿಗೆ ಬಳಸಿದರೆ ಪೊಲೀಸ್ ಮೊಕದ್ದಮೆ ಹೂಡಲಾಗುವುದು ಎಂಬ ಸೂಚನಾ ಫಲಕವನ್ನು ಹಾಕಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror