ಅಯೋಧ್ಯೆಯ ರಾಮ ಮಂದಿರದಲ್ಲಿ ನಿನ್ನೆ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಭಾರೀ ಜನಸಾಗರವೇ ಹರಿದು ಬಂದಿದೆ. ಮಂಗಳವಾರ ಬೆಳಗ್ಗೆಯೇ ರಾಮಲಲ್ಲಾನ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದರು. ಮೊದಲ ದಿನ 1.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯದ ಸುತ್ತ ಬಂದಿದ್ದರಿಂದ ವಿಪರೀತ ರಶ್ ಕಂಡುಬಂದಿತ್ತು. ಹೀಗಾಗಿ ಜನಸಂದಣಿಯನ್ನು ತಡೆಯಲು ಅಯೋಧ್ಯಾ ಆಡಳಿತವು ಮಧ್ಯಾಹ್ನ 2 ಗಂಟೆಯವರೆಗೆ ದರ್ಶನವನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ.ಮುಂದೆ ಓದಿ
ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಇದರಿಂದ ಅಪಾರ ಜನಸ್ತೋಮವನ್ನು ನಿಭಾಯಿಸಲು ಹರಸಾಹಸ ಪಡುತ್ತಿರುವ ಅಯೋಧ್ಯೆ ಪೊಲೀಸರು ಮಧ್ಯಾಹ್ನ 2.30ರವರೆಗೆ ದೇವಾಲಯದ ದ್ವಾರಗಳನ್ನು ಮುಚ್ಚಿರುವುದಾಗಿ ಘೋಷಿಸಿದ್ದಾರೆ. ದರ್ಶನಕ್ಕಾಗಿ ಬಂದಿರುವ ಭಾರತ ಮತ್ತು ಹೊರಗಿನ ಪ್ರವಾಸಿಗರು ದಯವಿಟ್ಟು ದೇವಾಲಯದ ದ್ವಾರಗಳಿಗೆ ಬರದಂತೆ ಕೇಳಿಕೊಳ್ಳುತ್ತೇವೆ” ಎಂದು ಪೊಲೀಸರು ರಾಂಪತ್‌ನಲ್ಲಿ ಘೋಷಿಸಿದ್ದಾರೆ.ಮುಂದೆ ಓದಿ
ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ವಿಪರೀತ ಸಂದಣಿ ಕಾರಣದಿಂದ ಭದ್ರತಾ ಸಿಬ್ಬಂದಿ ಸುವ್ಯವಸ್ಥೆ ಕಾಪಾಡಲು ಹರಸಾಹಸ ಪಡಬೇಕಾಯಿತು. ಮಂಗಳವಾರ ಸಂಜೆಯ ವೇಳೆಗೆ ಸುಮಾರು 2.5 ಲಕ್ಷದಿಂದ 3 ಲಕ್ಷ ಜನರು ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸಿದರು. 8,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.ಮುಂದೆ ಓದಿ
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಈ ಅವ್ಯವಸ್ಥೆಯನ್ನು ತಪ್ಪಿಸುವ ಸಲುವಾಗಿ ದರ್ಶನದ ಸಮಯ ಮತ್ತು ಭಕ್ತರಿಗೆ ಸಲಹೆಯನ್ನು ನೀಡಿದೆ. ಬೆಳಗ್ಗೆ 7 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ರಾಮ್ ಲಲ್ಲಾ ವಿಗ್ರಹವನ್ನು ವೀಕ್ಷಿಸಲು ಭಕ್ತರಿಗೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ. ಟ್ರಸ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ, ರಾಮನ ವಿಗ್ರಹಕ್ಕೆ ಹಣ್ಣುಗಳು ಮತ್ತು ಹಾಲನ್ನು ಅರ್ಪಿಸಬಹುದು.
Source : PTI
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು,…
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…