ದೇಶದ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.
ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.
ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…