Advertisement

ರಾಜ್ಯದಲ್ಲಿ ಹಸುಗಳಿಗೆ ಕಾಣಿಸಿಕೊಂಡ ವೈರಸ್ ಜ್ವರ|

Share

ದೇಶದ‌ ವಿವಿದೆಡೆ ಹಸುಗಳಿಗೆ ಕಂಡುಬಂದಿದ್ದ ಲಂಪಿ‌ ವೈರಸ್ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಚಿಕ್ಕಬಳ್ಳಾಪುರ ಪ್ರದೇಶದಲ್ಲಿ ಹಲವು ಕಡೆ ಈ ರೋಗ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ರಾಜಸ್ಥಾನದಲ್ಲಿ 11 ಲಕ್ಷ ಹಸುಗಳಿಗೆ ಈ ವೈರಸ್ ಕಾಣಿಸಿಕೊಂಡಿದೆ. ಈ ಕಾರಣದಿಂದ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ.

ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಕಂಡುಬಂದಿದೆ. ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತದೆ.


ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ.
ಇದೀಗ  ಪಶುವೈದ್ಯ ಇಲಾಖೆ ಅಧಿಕಾರಿಗಳು ಪರಿಹಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.


ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಸಮಸ್ಯೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

14 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

14 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

15 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

15 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago