ರಾಜ್ಯದಲ್ಲಿ ಪೋಡಿ ದುರಸ್ತಿಯಾಗಿ ರೈತರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ’ನನ್ನ ಭೂಮಿ ಅಭಿಯಾನ’ ನಡೆಸಲಾಗುತ್ತಿದ್ದು, ಜಮೀನಿನ ಮಾಲೀಕತ್ವಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನಕ್ಕೆ ಮತ್ತು ಪೋಡಿ ದುರಸ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ’ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದ್ದು, ದಶಕಗಳಿಂದ ಆಗದಿರುವ ಪೋಡಿ ದುರಸ್ತಿ ವಿತರಣೆ ವೇಗವಾಗಿ ನಡೆಯಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು. ದಶಕಗಳಿಂದ ರೈತರು ತಮ್ಮ ಜಮೀನಿಗೆ ಸಂಪೂರ್ಣ ಮಾಲಿಕತ್ವ ಸಿಗದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ರಾಜ್ಯದಲ್ಲಿ 15 ಲಕ್ಷ ಇಂತಹ ಪ್ರಕರಣಗಳಲ್ಲಿ ರೈತರಿಗೆ ಇನ್ನು ಮಾಲೀಕತ್ವ ಸಿಕ್ಕಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಪೋಡಿ ಅಭಿಯಾನವನ್ನು ಸರಳೀಕೃತಗೊಳಿಸಿ, ಡಿಜಿಟಲೀಕರಣ ಮಾಡಿ ಕಳೆದ ಡಿಸೆಂಬರ್‌ನಿಂದ ಅನುಷ್ಟಾನಗೊಳಿಸಿದೆ ಎಂದರು.
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…
ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ…