ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಸಂಚಾರ ಬಂದ್ | ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆ |

July 18, 2024
1:55 PM

ಕಳೆದ  ಐದಾರು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. 100 ಮಿಮೀಗಿಂತಲೂ ಅಧಿಕ ಮಳೆಯಾಗುತ್ತಿದೆ. ಹೀಗಾಗಿ ಘಾಟ್‌(Ghat) ಪ್ರದೇಶಗಳಾದ ಶಿರಾಡಿ(Shiradi Ghat), ಚಾರ್ಮಾಡಿ(Charmadi Ghat), ಬಿಸಲೇ((Bisile Ghat), ಆಗುಂಬೆ(Agumbe Ghat)ಸೇರಿದಂತೆ ಅನೇಕ ಘಾಟ್‌ ಪ್ರದೇಶಗಳಲ್ಲಿ ಭೂಕುಸಿತ, ಗುಡ್ಡ ಕುಸಿತ ಉಂಟಾಗುತ್ತಿದ್ದು ಪ್ರಯಾಣಿಕರು ಎಚ್ಚರ ವಹಿಸಬೇಕಾಗಿದೆ. ಪ್ರಯಾಣಿಕರೇ ಗಮನಿಸಿ, ಹಾಸನ‌ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ (Landslide In Shiradi Ghat) ಉಂಟಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರ ಬಂದ್ ಆಗಿದೆ. ಇಂದು ಮುಂಜಾನೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡ ಕುಸಿತದಿಂದ ಸುಮಾರು 10 ಕಿಮಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ.

Advertisement

ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಕರ್ ಓಡಾಟಕ್ಕೆ ತಾತ್ಕಾಲಿಕ ತಡೆ ವಿಧಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಸಂಚಾರಕ್ಕೆ ಪ್ರಮುಖ ಆಧಾರವಾಗಿದ್ದ ಶಿರಾಡಿ ಘಾಟ್‌ ಬಂದ್‌ನಿಂದ ಪ್ರಯಾಣಿಕರು ಸಮಸ್ಯೆ ಅನುಭವಿಸುವಂತಾಗಿದೆ. ಪೊಲೀಸರು ಹಾಸನದ ಕಂದಲಿ ಗ್ರಾಮದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಅತ್ತ ಚಾರ್ಮಾಡಿ ಘಾಟ್‌ನಲ್ಲೂ ಪ್ರಯಾಣ ದುಸ್ಥರವಾದ ಹಿನ್ನೆಲೆಯಲ್ಲಿ ಹಾಸನದಲ್ಲಿಯೇ ವಾಹನ ನಿಲ್ಲಿಸಲು ಸೂಚನೆ ನೀಡಲಾಗಿದೆ. ಸಕಲೇಶಪುರದವರೆಗೆ ತೆರಳುವ ಸಾರಿಗೆ ಬಸ್‌ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಮಂಗಳೂರು ಕಡೆಗೆ ಹೋಗೊ ಬಸ್‌ಗಳಿಗೂ ಹಾಸನ ತಾಲ್ಲೂಕಿನ ಕಂದಲಿ ಬಳಿ ತಡೆ ಒಡ್ಡಲಾಗಿದೆ.ಮಂಗಳೂರಿನಿಂದ ಬರುವ ವಾಹನಗಳನ್ನು  ಮಾಣಿ ಬಳಿಯ ಪರ್ಯಾಯ ರಸ್ತೆಗೆ ಕಳುಹಿಸಲಾಗುತ್ತಿದೆ.

ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಬಿದ್ದ ಮರ : ಮಲೆನಾಡು ಶಿವಮೊಗ್ಗದಲ್ಲಿ ನಿರಂತರ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ತಾಳಗುಪ್ಪ ಬೆಂಗಳೂರು ರೈಲು ಚಲಿಸುವ ವೇಳೆ ಹಳಿಯ ಮೇಲೆ ಮರ ಬಿದ್ದಿದೆ. ಶಿವಮೊಗ್ಗದ ಕುಂಸಿ ಸಮೀಪ ರೈಲ್ವೆ ಹಳಿಯ ಮೇಲೆ ಮರ ಬಿದ್ದಿದ್ದು ರೈಲು ಸಂಚಾರ ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು.

ಮೈಸೂರು : ಕಬಿನಿ ಜಲಾಶಯದಿಂದ 46 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಮೈಸೂರಿನ ನಂಜನಗೂಡಿನಲ್ಲಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ. ನಂಜನಗೂಡಿನ ಪರಶುರಾಮ ದೇವಸ್ಥಾನ ನದಿ ನೀರಿನಲ್ಲಿ ಮುಳುಗಡೆಯಾಗಿದೆ.  ದೇವಸ್ಥಾನದ ಎರಡು ಮಂಟಪಗಳು ಸೇರಿ ಎಲ್ಲವೂ ಮುಳುಗಡೆಯಾಗಿದ್ದು,  ಮನೆಗೆ ನೀರು ನುಗ್ಗುತ್ತಿರುವ ಕಾರಣ ನದಿ ಪಕ್ಕದ ನಿವಾಸಿಗಳು ಪ್ರವಾಹದ ಭೀತಿಯಲ್ಲಿ ಮನೆ ಖಾಲಿ ಮಾಡುತ್ತಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

Advertisement

ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯ ಪರಿಣಾಮವು ತೀವ್ರವಾಗಿದ್ದು, ಮೂರು ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಒಂದು ತೀವ್ರ ಹಾನಿಯಾಗಿದೆ ಮತ್ತು 18 ಭಾಗಶಃ ಹಾನಿಯಾಗಿದೆ ಎಂದು ವರದಿಯಾಗಿದೆ.ತುರ್ತು ಸಂದರ್ಭಗಳಲ್ಲಿ, ನಿವಾಸಿಗಳು ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ ವಾಟ್ಸಾಪ್ ಸಂಖ್ಯೆ 94835 11015 ಅನ್ನು ಸಂಪರ್ಕಿಸಲು ಕೋರಲಾಗಿದೆ. ಶರಾವತಿ ಹಿನ್ನೀರು ಭಾಗದಲ್ಲಿ ಮುಂದುವರೆದ ಮಳೆಯಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದುಬಂದಿದೆ.

  • ಅಂತರ್ಜಾಲ ಮಾಹಿತಿ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?
July 6, 2025
5:10 PM
by: ಸಾಯಿಶೇಖರ್ ಕರಿಕಳ
2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group