ಸುಬ್ರಹ್ಮಣ್ಯ | ಮನೆಗೆ ಗುಡ್ಡ ಕುಸಿತ | ಮುಂದುವರಿದ ಕಾರ್ಯಾಚರಣೆ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ದುರ್ಮರಣ |

August 1, 2022
11:07 PM

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನಲ್ಲಿ ಮೇಘಸ್ಫೋಟ ಸಂಭವಿಸಿದೆ. ಕೆಲವೇ ತಾಸಿನಲ್ಲಿ ಭಾರೀ ಮಳೆಯಾಗಿ ದುರಂತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದ್ದು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳು ದುರಂತದಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ. 

ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ  ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮೂಲತಃ ಪಂಜದ ಕರಿಮಜಲು ಕುಶಾಲಪ್ಪ / ಕುಸುಮಾಧರ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಅವರ ಇಬ್ಬರು ಮಕ್ಕಳಾದ ಶ್ರುತಿ (11) ಹಾಗೂ ಜ್ಞಾನ ಶ್ರೀ (6) ಮಣ್ಣಿನಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಚರಣೆ ನಡೆದಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ಮಾಡುವ ಕಾರ್ಯ ನಡೆದಿದೆ. ಮನೆಯಲ್ಲಿ 5 ಜನರಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಗುಡ್ಡ ಕುಸಿತದ ವೇಳೆ ಮೂರು ಮಂದಿ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಸತತ ಪ್ರಯತ್ನ ಬಳಿಕ ಮಣ್ಣು ತೆರವು ಕಾರ್ಯ ನಡೆದ ಬಳಿಕ ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು ಮೃತಪಟ್ಟಿರುವುದು ಖಚಿತವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror