ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನಲ್ಲಿ ಮೇಘಸ್ಫೋಟ ಸಂಭವಿಸಿದೆ. ಕೆಲವೇ ತಾಸಿನಲ್ಲಿ ಭಾರೀ ಮಳೆಯಾಗಿ ದುರಂತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದ್ದು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳು ದುರಂತದಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ.
ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮೂಲತಃ ಪಂಜದ ಕರಿಮಜಲು ಕುಶಾಲಪ್ಪ / ಕುಸುಮಾಧರ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಅವರ ಇಬ್ಬರು ಮಕ್ಕಳಾದ ಶ್ರುತಿ (11) ಹಾಗೂ ಜ್ಞಾನ ಶ್ರೀ (6) ಮಣ್ಣಿನಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಚರಣೆ ನಡೆದಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ಮಾಡುವ ಕಾರ್ಯ ನಡೆದಿದೆ. ಮನೆಯಲ್ಲಿ 5 ಜನರಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಗುಡ್ಡ ಕುಸಿತದ ವೇಳೆ ಮೂರು ಮಂದಿ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಸತತ ಪ್ರಯತ್ನ ಬಳಿಕ ಮಣ್ಣು ತೆರವು ಕಾರ್ಯ ನಡೆದ ಬಳಿಕ ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು ಮೃತಪಟ್ಟಿರುವುದು ಖಚಿತವಾಗಿದೆ.
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…