ಬರಲಿದೆ ಡ್ರೋನ್ ಮೂಲಕ ಸರ್ವೆ, ವಿನೂತನ ವಿಧಾನಗಳು | ಕೇಂದ್ರ ಸರ್ಕಾರ ಚಿಂತನೆ: ಡಾ ವೀರೇಂದ್ರ ಹೆಗ್ಗಡೆ |

June 3, 2023
7:15 PM

ಡ್ರೋನ್ ಮೂಲಕ ಭೂಮಾಪನ ಮತ್ತು ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಡ್ರೋನ್‌ ಮೂಲಕ ಜಾಗದ ಅಳತೆ ಮಾಡಿ, ಹಕ್ಕುಪತ್ರ ನೀಡುವ ಕ್ರಮ ಮೊದಲಾದ ಅನೇಕ ಹೊಸ ಪದ್ಧತಿಗಳು ಸದ್ಯದಲ್ಲೆ ಬಳಕೆಗೆ ಬರಲಿವೆ. ದೇಶದ ಭವ್ಯ ಇತಿಹಾಸ, ಪರಂಪರೆ, ಸಂಸ್ಕೃತಿ ಹಿನ್ನೆಲೆಯಲ್ಲಿ ವರ್ತಮಾನದ ಸ್ಥಿತಿಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯ ರೂಪಿಸಬೇಕಾಗಿದೆ ಎಂದರು.

Advertisement
Advertisement
Advertisement

ಪುಸ್ತಕವು ಎಲ್ಲಾ ಚಟುವಟಿಕೆಗಳ ವಿವರವಾದ ಮಾಹಿತಿಯನ್ನು ಹೊಂದಿದೆ. ಮುಂಬರುವ ದಿನಗಳಲ್ಲಿ ನೂತನ ಸಂಸತ್ ಭವನದಲ್ಲಿ ನಡೆಯುವ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಿ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತೇನೆ. ಧರ್ಮಾಧಿಕಾರಿಯಾಗಿ ಮಂಜುನಾಥನ ಸೇವೆಯ ಜೊತೆಗೆ ರಾಷ್ಟ್ರ ಸೇವೆ ಮಾಡುವ ಸೌಭಾಗ್ಯ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಂಸದರಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿದ್ದಾರೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸಕ್ರಿಯವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

Advertisement

ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು. ರಾಜ್ಯಸಭೆ ಸದಸ್ಯರ ಆಪ್ತ ಕಾರ್ಯದರ್ಶಿ ಕೆ.ಎನ್‌. ಜನಾರ್ದನ್‌ ಸ್ವಾಗತಿಸಿದರು. ರುಡ್‌ಸೆಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್‌ ಕಲ್ಲಾಪುರ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಮಂಜುಶ್ರೀ ಪ್ರಿಂಟರ್ಸ್‌ ಹಾಗೂ ನಾನಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror