ಡ್ರೋನ್ ಮೂಲಕ ಭೂಮಾಪನ ಮತ್ತು ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಡ್ರೋನ್ ಮೂಲಕ ಜಾಗದ ಅಳತೆ ಮಾಡಿ, ಹಕ್ಕುಪತ್ರ ನೀಡುವ ಕ್ರಮ ಮೊದಲಾದ ಅನೇಕ ಹೊಸ ಪದ್ಧತಿಗಳು ಸದ್ಯದಲ್ಲೆ ಬಳಕೆಗೆ ಬರಲಿವೆ. ದೇಶದ ಭವ್ಯ ಇತಿಹಾಸ, ಪರಂಪರೆ, ಸಂಸ್ಕೃತಿ ಹಿನ್ನೆಲೆಯಲ್ಲಿ ವರ್ತಮಾನದ ಸ್ಥಿತಿಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯ ರೂಪಿಸಬೇಕಾಗಿದೆ ಎಂದರು.
ಪುಸ್ತಕವು ಎಲ್ಲಾ ಚಟುವಟಿಕೆಗಳ ವಿವರವಾದ ಮಾಹಿತಿಯನ್ನು ಹೊಂದಿದೆ. ಮುಂಬರುವ ದಿನಗಳಲ್ಲಿ ನೂತನ ಸಂಸತ್ ಭವನದಲ್ಲಿ ನಡೆಯುವ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಿ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತೇನೆ. ಧರ್ಮಾಧಿಕಾರಿಯಾಗಿ ಮಂಜುನಾಥನ ಸೇವೆಯ ಜೊತೆಗೆ ರಾಷ್ಟ್ರ ಸೇವೆ ಮಾಡುವ ಸೌಭಾಗ್ಯ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಂಸದರಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿದ್ದಾರೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸಕ್ರಿಯವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು. ರಾಜ್ಯಸಭೆ ಸದಸ್ಯರ ಆಪ್ತ ಕಾರ್ಯದರ್ಶಿ ಕೆ.ಎನ್. ಜನಾರ್ದನ್ ಸ್ವಾಗತಿಸಿದರು. ರುಡ್‌ಸೆಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಮಂಜುಶ್ರೀ ಪ್ರಿಂಟರ್ಸ್ ಹಾಗೂ ನಾನಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…