ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಮತ್ತು ಚಾರ್ಮಾಡಿ ಘಾಟ್‌ನಲ್ಲಿನ ಇಳಿಜಾರು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಭೂವಿಜ್ಞಾನ ಇಲಾಖೆ ಸಮೀಕ್ಷೆಯ ತಜ್ಞರು ವರದಿ ಮಾಡಿದ್ದಾರೆ. ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಇಳಿಜಾರಿನ ಪ್ರದೇಶವನ್ನು ಅಧ್ಯಯನ ಮಾಡಿದ ನಂತರ ವರದಿಯನ್ನು ಸಲ್ಲಿಸಿದೆ ಮತ್ತು ಭವಿಷ್ಯದಲ್ಲಿ ಭೂಕುಸಿತಗಳನ್ನು ತಪ್ಪಿಸಲು ಹಲವು ಕ್ರಮಗಳನ್ನು ಶಿಫಾರಸು ಮಾಡಿದೆ.…..ಮುಂದೆ ಓದಿ….
ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಇಲಾಖೆಯ ತಂಡ ಸಮೀಕ್ಷೆ ನಡೆಸಿದೆ. ಇದೀಗ ವರದಿಯನ್ನು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ವರದಿಯಲ್ಲಿ ಪ್ರಮುಖವಾಗಿ ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರ ನಿಯಂತ್ರಣವೇ ಭೂಕುಸಿತಗಳ ತಡೆಗೆ ಪ್ರಮುಖವಾದ ಪರಿಹಾರ.
ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ ಭೀತಿ ಉಂಟಾಗಿದೆ ಎಂದು ವರದಿ ತಿಳಿಸಿದೆ.
ಭೂಕುಸಿತದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತವು ಜಿಯೋಲಾಜಿಕಲ್ ಸರ್ವೇ ಟೀಮ್ ಅಭಿಪ್ರಾಯವನ್ನು ಕೇಳಿತ್ತು. ಆಗಸ್ಟ್ 10 ಮತ್ತು 12 ರಂದು ಚಿಕ್ಕಮಗಳೂರು, ಕಳಸ, ಶೃಂಗೇರಿ, ಮೂಡಿಗೆರೆ ಮತ್ತು ಕೊಪ್ಪ ತಾಲೂಕಿನಲ್ಲಿರುವ ಸ್ಥಳಗಳಿಗೆ ತಜ್ಞರ ತಂಡ ಭೇಟಿ ನೀಡಿತ್ತು. ಅವರು ಸ್ಥಳಗಳನ್ನು ಅಧ್ಯಯನ ಮಾಡಿದರು ಮತ್ತು ಭೂಕುಸಿತಕ್ಕೆ ಕಾರಣಗಳ ಬಗ್ಗೆ ಅವಲೋಕನ ಮಾಡಿದರು. ನಿರ್ದೇಶಕರಾದ ಡಾ.ಆರ್.ಸಜೀವ್ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಭೂವಿಜ್ಞಾನಿಗಳಾದ ಸೆಂಥಿಲ್ ಕುಮಾರ್ ಕೆ. ಮತ್ತು ಸೋವೇಶ್ ದುಲಾಲ್ ಮುದುಲಿ ವರದಿಯನ್ನು ಸಿದ್ಧಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿಯಲ್ಲಿ ಮಾಹಿತಿ ನೀಡಲಾಗಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 88 ಅತ್ಯಂತ ಅಪಾಯಕಾರಿ ಸ್ಥಳಗಳಿವೆ ಎಂದು ಉಲ್ಲೇಖಿಸಿದೆ. 80% ಅವೈಜ್ಞಾನಿಕ ಕಾಮಗಾರಿಯಿಂದಲೇ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಕುಸಿತ ಉಂಟಾಗುತ್ತಿದೆ ಎಂಬ ಅಂಶ ಪತ್ತೆಯಾಗಿದೆ.
The Geological Survey of India has identified the potential for landslides in the hilly regions of Mullaiyanagari, Bababudangiri, and Charmadi Ghat in the Chikmagalur district.After conducting a study of slope areas in various locations within the district, a report has been submitted outlining recommendations to prevent future landslides.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…