ದ ಕ ಜಿಲ್ಲೆ ಬೆಳೆವಿಮೆ ಯೋಜನೆ | ರೈತರ ನೋಂದಣಿಗೆ ಆಗಸ್ಟ್  14 ಕೊನೆಯ ದಿನ

August 12, 2025
7:34 AM

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದರೆ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ.  ಸಾಲ ಪಡೆಯದ ರೈತರ ನೋಂದಣಿಗೆ ಆಗಸ್ಟ್  14 ಕೊನೆಯ ದಿನ ಹಾಗೂ ಸಾಲ ಪಡೆದ ರೈತರಿಗೆ ( ಜುಲೈ 31 ರೊಳಗೆ ಏಅಅ ಅಥವಾ ಬೆಳೆಸಾಲ ಮಂಜೂರಾತಿ/ನವೀಕರಣವಾಗಿದ್ದಲ್ಲಿ)   ಆಗಸ್ಟ್ 30 ಕೊನೆಯ ದಿನ.

ಈ ಹಿನ್ನೆಲೆಯಲ್ಲಿ  ಈವರೆಗೆ ಯೋಜನೆಯಡಿ ನೋಂದಣಿಗೊಳ್ಳದ ರೈತರು ತುರ್ತಾಗಿ ಯೋಜನೆಯಡಿ ನೋಂದಣಿಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್‍ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಯೋಜನೆಯಡಿ ನೋಂದಣಿಗೊಳ್ಳಬಹುದು. ಹಾಗೂ ಸಾಮಾನ್ಯ ಸೇವಾ ಕೇಂದ್ರ  ಮತ್ತು ಗ್ರಾಮ ಜನ್ ಗಳ ಮೂಲಕವೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಪ್ರತಿ ಹೆಕ್ಟೇರಿಗೆ ಕ್ರಮವಾಗಿ ರೂ.6400 ಹಾಗೂ ರೂ.2350 ಗಳಾಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆಯ ಅನುಷ್ಟಾನಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯಾಗಿ ಪ್ರಸಕ್ತ ಸಾಲಿಗೆ ಟಾಟಾ ಎಐಜಿ ಸಂಸ್ಥೆಯು ಆಯ್ಕೆಯಾಗಿದೆ.

ಹೆಚ್ಚಿನ ಮಾಹಿತಿಗೆ ದ.ಕ ತೋಟಗಾರಿಕೆ ಉಪನಿರ್ದೇಶಕ ಮಂಜುನಾಥ ಡಿ- 9448999226, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ ಕೆ- 9449258204, ಬಂಟ್ವಾಳ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, – 9448206393, ಪುತ್ತೂರು  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ರೇಖಾ ಎ- 9731854527,   ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಸುಹಾನ ಪಿ.ಕೆ.- 9880993238, ಬೆಳ್ತಂಗಡಿ        ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್.- 9448336863, ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಶು – 9131962255 ಸಂಪರ್ಕಿಸಬಹುದು ಎಂದು ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror