ಬೆಳೆಗಳ ಮಾರಾಟ ವ್ಯವಸ್ಥೆಯಲ್ಲಾಗುವ ಸೋರಿಕೆ ಕಡಿಮೆಗೊಳಿಸಬೇಕಿದೆ

October 19, 2024
11:05 PM

ಬೆಳೆಗಳ ಮಾರಾಟ ವ್ಯವಸ್ಥೆಯಲ್ಲಾಗುವ ಸೋರಿಕೆ ಕಡಿಮೆಗೊಳಿಸಿ ರೈತರಿಗೆ ಅಧಿಕ ಲಾಭ ದೊರೆಯುವಂತಾಗಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾಗಿದೆ, ಈ ನಿಟ್ಟಿನಲ್ಲಿ ವೈಜ್ಞಾನಿಕ ವ್ಯವಸ್ಥೆ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

Advertisement

ದೆಹಲಿಯಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಹಿಂಗಾರು ಅಭಿಯಾನದ ಕುರಿತು  ನಡೆದ  ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿಕರ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದು, ಸತತವಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಕನಿಷ್ಠ ಬೆಂಬಲ ಬೆಲೆಯ ಮೂಲಕ ರೈತರು ಬೆಳೆದ ಬೆಳೆಗಳನ್ನು ಖರೀದಿಸಲಾಗುತ್ತಿದೆ. ಕೃಷಿ ರಫ್ತು ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಅನೇಕ ಬೆಳೆಗಳ ರಫ್ತಿನ ಮೇಲಿನ ಶುಲ್ಕವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದರು. ಬಹುಬೇಗ ಹಾಳಾಗುವ ಕೃಷಿ ಬೆಳೆಗಳ ಸೂಕ್ತ ಸಂಗ್ರಹ, ಸಾಗಾಟಕ್ಕೆ ಅನುಕೂಲವಾಗುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. ಕೃಷಿ ಬೆಳೆಗಳ ವೈವಿಧ್ಯತೆ, ಮೌಲ್ಯವರ್ಧನೆಗೆ ಉತ್ತೇಜನ ನೀಡಲಾಗುತ್ತಿದ್ದು, ದೇಶದ ಕೃಷಿಕರ ಆದಾಯ ಹೆಚ್ಚಳಕ್ಕೆ ಸರ್ವ ಪ್ರಯತ್ನ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಎಲ್ಲಾ ರಾಜ್ಯಗಳ ಕೃಷಿ ಸಚಿವರು, ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ
ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
April 6, 2025
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group