ಬೆಳೆಗಳ ಮಾರಾಟ ವ್ಯವಸ್ಥೆಯಲ್ಲಾಗುವ ಸೋರಿಕೆ ಕಡಿಮೆಗೊಳಿಸಿ ರೈತರಿಗೆ ಅಧಿಕ ಲಾಭ ದೊರೆಯುವಂತಾಗಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾಗಿದೆ, ಈ ನಿಟ್ಟಿನಲ್ಲಿ ವೈಜ್ಞಾನಿಕ ವ್ಯವಸ್ಥೆ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.
ದೆಹಲಿಯಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಹಿಂಗಾರು ಅಭಿಯಾನದ ಕುರಿತು ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿಕರ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದು, ಸತತವಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಕನಿಷ್ಠ ಬೆಂಬಲ ಬೆಲೆಯ ಮೂಲಕ ರೈತರು ಬೆಳೆದ ಬೆಳೆಗಳನ್ನು ಖರೀದಿಸಲಾಗುತ್ತಿದೆ. ಕೃಷಿ ರಫ್ತು ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಅನೇಕ ಬೆಳೆಗಳ ರಫ್ತಿನ ಮೇಲಿನ ಶುಲ್ಕವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದರು. ಬಹುಬೇಗ ಹಾಳಾಗುವ ಕೃಷಿ ಬೆಳೆಗಳ ಸೂಕ್ತ ಸಂಗ್ರಹ, ಸಾಗಾಟಕ್ಕೆ ಅನುಕೂಲವಾಗುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. ಕೃಷಿ ಬೆಳೆಗಳ ವೈವಿಧ್ಯತೆ, ಮೌಲ್ಯವರ್ಧನೆಗೆ ಉತ್ತೇಜನ ನೀಡಲಾಗುತ್ತಿದ್ದು, ದೇಶದ ಕೃಷಿಕರ ಆದಾಯ ಹೆಚ್ಚಳಕ್ಕೆ ಸರ್ವ ಪ್ರಯತ್ನ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಎಲ್ಲಾ ರಾಜ್ಯಗಳ ಕೃಷಿ ಸಚಿವರು, ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…