ವಿದ್ಯುತ್ ಬಿಲ್ ಬಾಕಿ ಹೆಸರಿನಲ್ಲಿ ನಡೆಯುತ್ತಿದೆ ವಂಚನೆ | ಎಚ್ಚರಿಕೆ ಗ್ರಾಹಕರೇ ಎಚ್ಚರ |

November 12, 2022
7:58 PM

ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಮೆಸೇಜ್‌ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.

ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror