ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಮೆಸೇಜ್ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್‌ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.
ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…