1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ

February 17, 2023
10:58 PM

ಸರಕಾರಿ ಪದವಿ ಕಾಲೇಜಿಗಳಲ್ಲಿ ಖಾಲಿ ಇರುವ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಲಿಖೀತ ಪರೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

Advertisement
Advertisement

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಾ| ಅವಿನಾಶ್‌ ಉಮೇಶ್‌ ಜಾಧವ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 6,500 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 5,000 ಹುದ್ದೆಗಳು ಭರ್ತಿಯಾಗಿವೆ. ಹೊಸದಾಗಿ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಲಿಖೀತ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲು ನಮಗೆ ಹೆಚ್ಚುವರಿಯಾಗಿ 8,000 ಹುದ್ದೆಗಳು ಬೇಕಾಗುತ್ತದೆ. 12 ಸಾವಿರ ಅತಿಥಿ ಉಪನ್ಯಾಸಕರ ಮೂಲಕವೂ ಕೊರತೆ ಇರುವ ಕಡೆ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಎಲ್ಲೆಲ್ಲಿ ಹುದ್ದೆಗಳು ಖಾಲಿ ಇವೆಯೋ ಅಲ್ಲೆಲ್ಲ ಭರ್ತಿ ಮಾಡಬೇಕು. ಕೆಲವು ಕಾಲೇಜುಗಳಲ್ಲಿ 80-90ರಷ್ಟು ವಿದ್ಯಾರ್ಥಿಗಳಿಗೆ ಒಬ್ಬರೇ ಪ್ರಾಧ್ಯಾಪಕರಿದ್ದು, ಇಂತಹ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ಮಾಡಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror