ಸರಕಾರಿ ಪದವಿ ಕಾಲೇಜಿಗಳಲ್ಲಿ ಖಾಲಿ ಇರುವ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಲಿಖೀತ ಪರೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಾ| ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 6,500 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 5,000 ಹುದ್ದೆಗಳು ಭರ್ತಿಯಾಗಿವೆ. ಹೊಸದಾಗಿ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಲಿಖೀತ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲು ನಮಗೆ ಹೆಚ್ಚುವರಿಯಾಗಿ 8,000 ಹುದ್ದೆಗಳು ಬೇಕಾಗುತ್ತದೆ. 12 ಸಾವಿರ ಅತಿಥಿ ಉಪನ್ಯಾಸಕರ ಮೂಲಕವೂ ಕೊರತೆ ಇರುವ ಕಡೆ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಎಲ್ಲೆಲ್ಲಿ ಹುದ್ದೆಗಳು ಖಾಲಿ ಇವೆಯೋ ಅಲ್ಲೆಲ್ಲ ಭರ್ತಿ ಮಾಡಬೇಕು. ಕೆಲವು ಕಾಲೇಜುಗಳಲ್ಲಿ 80-90ರಷ್ಟು ವಿದ್ಯಾರ್ಥಿಗಳಿಗೆ ಒಬ್ಬರೇ ಪ್ರಾಧ್ಯಾಪಕರಿದ್ದು, ಇಂತಹ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ಮಾಡಿದರು.
ನಾಗಾಲ್ಯಾಂಡ್‌ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…