ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

July 9, 2025
8:50 PM

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ನೆಲೆಸುವಲ್ಲಿ ಜನಪ್ರತಿನಿಧಿಗಳು, ಧಾರ್ಮಿಕ ಪ್ರಮುಖರು ಸೇರಿದಂತೆ ಪ್ರತಿಯೊಬ್ಬರೂ ಸಹಕರಿಸಬೇಕು. ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ. ಕರಾವಳಿಯಲ್ಲಿ ಶಾಂತಿ ಕಾಪಾಡುವ ಅವಶ್ಯಕತೆ ಇದೆ. ಈ ಪ್ರದೇಶವು ಅಭಿವೃದ್ದಿ ಮತ್ತು ಬೆಳವಣಿಗೆಗೆ ಪೂರಕವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕರಾವಳಿ ಅಭಿವೃದ್ದಿಗೆ ಒತ್ತು ನೀಡುತ್ತಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಡ್ರಗ್ಸ್ ಮಾಫಿಯಾದ ವಿರುದ್ಧವೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಕರಾವಳಿ ಪ್ರದೇಶದಲ್ಲಿ ಸೇಡಿನ ಹತ್ಯೆಗಳು ಮತ್ತು ಇರಿತ ಪ್ರಕರಣಗಳು ಸೇರಿದಂತೆ ಹೆಚ್ಚುತ್ತಿರುವ ಕೋಮುಗಲಭೆಗೆ ಕಡಿವಾಣ ಹಾಕಲು ಗೃಹಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ವಿವಿಧ ಧಾರ್ಮಿಕ ಸಮುದಾಯಗಳ ನಾಯಕರೊಂದಿಗೆ ಶಾಂತಿಸಭೆ ನಡೆಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ
ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ
September 26, 2026
9:36 AM
by: ಮಹೇಶ್ ಪುಚ್ಚಪ್ಪಾಡಿ
ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror