ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಂಡು, ಅರಣ್ಯ ಭೂಮಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಶಿರಾ ತಾಲೂಕಿನ ಶೀಬಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ. ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು ಎಂದು ನಿರ್ದೇಶನ ನೀಡಿದರು. ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ. ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದುಪಡಿಸುವಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆ ಹೂಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…