ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ | ಕಾನೂನು ಕ್ರಮಕ್ಕೆ ಒಳಪಡಿಸಲು ಸರ್ಕಾರ ಸೂಚನೆ |

June 21, 2023
11:06 AM

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ.

Advertisement

ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು… ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಸುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು. ಸುಳ್ಳು ಸುದ್ದಿಗಳ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಯಾರೇ ಮಾಡಿದರೂ ಅದನ್ನು ಸರ್ಕಾರ ಸಹಿಸುವುದಿಲ್ಲ. ಸಾಮರಸ್ಯ ಕಾಪಾಡುವ ಜೊತೆಗೆ ಪ್ರತಿಯೊಬ್ಬರಿಗೂ ಶಾಂತಿ, ನೆಮ್ಮದಿಯ ವಾತಾವರಣವನ್ನು ನೀಡಲು ನಾವು ಬದ್ಧರಿದ್ದೇವೆ ಮುಖ್ಯಮಂತ್ರಿ  ಸಿದ್ಧರಾಮಯ್ಯ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾವಿನ ನಂತರ  ಬಾಳೆಯು ಪ್ರಮುಖ ಹಣ್ಣಿನ ಬೆಳೆ
February 11, 2025
6:50 AM
by: The Rural Mirror ಸುದ್ದಿಜಾಲ
ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ
February 11, 2025
6:47 AM
by: The Rural Mirror ಸುದ್ದಿಜಾಲ
ಕೃಷಿ ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಶ್ರಮಿಸಬೇಕು
February 11, 2025
6:39 AM
by: The Rural Mirror ಸುದ್ದಿಜಾಲ
ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |
February 10, 2025
6:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror