ಹವಾಮಾನ ವರದಿ | 24 – 11 -2025 | ನ.25 ರಿಂದ ಮಳೆ ಸಾಧ್ಯತೆ ಕಡಿಮೆ – ಒಣ ಹವೆ ಆವರಿಸುವ ಲಕ್ಷಣ

November 24, 2025
11:59 AM

25.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಬೆಳಗಾವಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 25 ರಿಂದ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಬಿಸಿಲು ಹಾಗೂ ಸಂಜೆ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 25ರಿಂದ ಮಲೆನಾಡು ಭಾಗಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ನವೆಂಬರ್ 25 ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 25 ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ದಕ್ಷಿಣ ಥೈಲ್ಯಾಂಡ್ ತೀರದಲ್ಲಿ ಉಂಟಾದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಧ್ಯ ಬಂಗಾಳಕೊಲ್ಲಿಗೆ ತಲಪುವ ನಿರೀಕ್ಷೆಯಿದೆ. ಇದರೆ ಜೊತೆಗೆ ಇನ್ನೆರಡು ವಾಯುಭಾರ ಕುಸಿತಗಳು ವಿಲೀನಗೊಂಡ ನವೆಂಬರ್ 26 ರಂದು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಲಕ್ಷಣಗಳಿವೆ. ಈಗಿನಂತೆ ಇದು ಉತ್ತರಕ್ಕೆ ಚಲಿಸಿ ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರೊಂದಿಗೆ ಹಿಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚುರುಕುಗೊಳ್ಳಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror