Advertisement
ವೆದರ್ ಮಿರರ್

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

Share

28.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದ್ದರೂ ತೀವ್ರತೆ ಸ್ವಲ್ಪ ಕಡಿಮೆಯಾಗಲಿದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 28 ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿದ್ದು, ಜೂನ್ 3ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲೂ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದ್ದರೂ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 28ರಿಂದ ಮುಂಗಾರು ಮತ್ತೆ ಚುರುಕಾದರೂ ಜೂನ್ 1ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು ಜಿಲ್ಲೆಯ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 28ರಿಂದ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಇದ್ದು, ನಂತರ ಬಿಸಿಲಿನ ಅವಧಿ ಹೆಚ್ಚಿರಬಹುದು.

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ 4 ದಿನಗಳಲ್ಲಿ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

23 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago