Advertisement
ವೆದರ್ ಮಿರರ್

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

Share

29.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ 2 ಅಥವಾ 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ 29 ರಿಂದ ದಿನದಲ್ಲಿ ಒಂದೆರಡು ಮಳೆಯ ಸಾಧ್ಯತೆಗಳಿವೆ. ಜುಲೈ 3 ರಿಂದ ಹೆಚ್ಚಾದರೆ 6 ರ ನಂತರ ಮತ್ತೆ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯಲಿದ್ದು, ಜುಲೈ 3 ರಿಂದ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದ್ದರೂ 6 ರ ನಂತರ ಮತ್ತೆ ಕಡಿಮೆಯಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ ಮೊದಲಾರ್ಧದಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

9 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

9 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

9 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

9 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

10 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago