Advertisement
ವೆದರ್ ಮಿರರ್

ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?

Share

25.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ನಿರಂತರ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 29ರ ತನಕ ಈ ವಾತಾವರಣವು ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ನಿರಂತರ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 29 ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿಯ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 27 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ.

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್‌ ಸ್ತರ  ಹಾಗೂ ಮಧ್ಯಮ ಸ್ತರಗಳಲ್ಲಿ ವ್ಯಾಪಿಸಿದ್ದು, ಮಧ್ಯಮ ಸ್ತರದಲ್ಲಿ ಮುಂಗಾರು ಬಹಳ ಪ್ರಭಲವಾಗಿರುವುದರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ದುರ್ಬಲಗೊಳ್ಳುತ್ತಿದ್ದಂತೆಯೇ ಮುಂಗಾರು ಸಹ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

7 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

8 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

24 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago