25.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ನಿರಂತರ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 29ರ ತನಕ ಈ ವಾತಾವರಣವು ಮುಂದುವರಿಯುವ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ನಿರಂತರ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 29 ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿಯ ಬಹುತೇಕ ಭಾಗಗಳಲ್ಲಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 27 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ.
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ ಸ್ತರಗಳಲ್ಲಿ ವ್ಯಾಪಿಸಿದ್ದು, ಮಧ್ಯಮ ಸ್ತರದಲ್ಲಿ ಮುಂಗಾರು ಬಹಳ ಪ್ರಭಲವಾಗಿರುವುದರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ದುರ್ಬಲಗೊಳ್ಳುತ್ತಿದ್ದಂತೆಯೇ ಮುಂಗಾರು ಸಹ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…