Advertisement
ವೆದರ್ ಮಿರರ್

ಹವಾಮಾನ ವರದಿ | 05-09-2025 | ಮಳೆ ಸಾಕು.. ಎನ್ನುವವರು ಸೆ.12 ರವರೆಗೆ ಕಾಯಬೇಕು..!

Share

06.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ, ಅಲ್ಲಲ್ಲಿ ದಿನದಲ್ಲಿ 2,3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಸೆಪ್ಟೆಂಬರ್ 7 ರ ತನಕ ದಿನದಲ್ಲಿ ಒಂದೆರಡು ಮಳೆ ಇದ್ದು, 8 ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಸೆ. 12 ರಿಂದ ದಿನದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಇರಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಭಾಗಮಂಡಲ, ತಲಕಾವೇರಿ, ಮಡಿಕೇರಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ಹಾಸನದ ಒಂದೆರಡು ಕಡೆ, ಚಿಕ್ಕಮಗಳೂರಿನ ಶೃಂಗೇರಿ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಸೆಪ್ಟೆಂಬರ್ 9 ರಿಂದ ಮೂರು ದಿನಗಳ ಕಾಲ ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿದ್ದು, ಸೆ.12 ರಿಂದ ದಿನದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸೂಚನೆಗಳಿವೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸೆಪ್ಟೆಂಬರ್ 6 ಹಾಗೂ 7 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಸೆಪ್ಟೆಂಬರ್ 6 ರಿಂದ 12 ರ ತನಕ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 12ರಿಂದ ರಾಜ್ಯದಾದ್ಯಂತ ದಿನದ ಹೆಚ್ಚಿನ ಅವಧಿಯಲ್ಲಿ ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಸ್ಸಾ ಮೂಲಕ ಪ್ರವೇಶಿಸಿ ಮಧ್ಯಪ್ರದೇಶ, ರಾಜಸ್ತಾನ ಮೂಲಕ ಇವತ್ತು ಗುಜರಾತ್ ಪ್ರವೇಶಿಸಲಿದೆ. ಇವತ್ತು ಮಹಾರಾಷ್ಟ್ರದ ಮುಂಬೈ ಸುತ್ತಮುತ್ತ ಹಾಗೂ ಉತ್ತರ ಗುಜರಾತ್ ನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಗುಜರಾತ್, ರಾಜಸ್ತಾನ ಗಡಿ ಭಾಗಗಳಲ್ಲಿ ಸೆಪ್ಟೆಂಬರ್ 7ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

11 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

14 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

19 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

19 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago