22.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆ ಮತ್ತೂ ಹೆಚ್ಚಿರುವ ಸಾಧ್ಯತೆಗಳಿವೆ. ಈಗಿನಂತೆ ಜುಲೈ 22ರಿಂದ ಮಳೆಯ ಪ್ರಮಾಣ ಸ್ವಲ್ಪ ಇಳಿಕೆಯಾಗುವ ಲಕ್ಷಣಗಳಿದ್ದು, ಜುಲೈ 30ರಿಂದ ಬಿಸಿಲು ಕಾಣುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಉತ್ತರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಶೃಂಗೇರಿ, ಆಗುಂಬೆ, ಕೊಪ್ಪ, ಬಾಳೆಹೊನ್ನೂರು, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ಸಾಧ್ಯತೆಗಳಿವೆ. ಈಗಿನಂತೆ ಜುಲೈ 22ರಿಂದ ಮಳೆಯ ಕಡಿಮೆಯಾಗುವ ಲಕ್ಷಣಗಳಿದ್ದು, 29ರಿಂದ ಬಿಸಿಲು ಮೂಡಬಹುದು.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು ಅಲ್ಲಲ್ಲಿ ತುಂತುರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಉತ್ತರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಜುಲೈ 25ರ ತನಕ ಹಾಗೂ ಉತ್ತರ ಒಳನಾಡಿನಲ್ಲಿ ಜುಲೈ ತಿಂಗಳ 27ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ ಕಾದು ನೋಡಬೇಕಾಗಿದೆ. ಪ್ರಭಲಗೊಂಡರೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…
ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…
ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…
ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…