Advertisement
ವೆದರ್ ಮಿರರ್

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |

Share

22.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆ ಮತ್ತೂ ಹೆಚ್ಚಿರುವ ಸಾಧ್ಯತೆಗಳಿವೆ. ಈಗಿನಂತೆ ಜುಲೈ 22ರಿಂದ ಮಳೆಯ ಪ್ರಮಾಣ ಸ್ವಲ್ಪ ಇಳಿಕೆಯಾಗುವ ಲಕ್ಷಣಗಳಿದ್ದು, ಜುಲೈ 30ರಿಂದ ಬಿಸಿಲು ಕಾಣುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಉತ್ತರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಶೃಂಗೇರಿ, ಆಗುಂಬೆ, ಕೊಪ್ಪ, ಬಾಳೆಹೊನ್ನೂರು, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ಸಾಧ್ಯತೆಗಳಿವೆ.  ಈಗಿನಂತೆ ಜುಲೈ 22ರಿಂದ ಮಳೆಯ ಕಡಿಮೆಯಾಗುವ ಲಕ್ಷಣಗಳಿದ್ದು, 29ರಿಂದ ಬಿಸಿಲು ಮೂಡಬಹುದು.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು ಅಲ್ಲಲ್ಲಿ ತುಂತುರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಉತ್ತರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಜುಲೈ 25ರ ತನಕ ಹಾಗೂ ಉತ್ತರ ಒಳನಾಡಿನಲ್ಲಿ ಜುಲೈ ತಿಂಗಳ 27ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ ಕಾದು ನೋಡಬೇಕಾಗಿದೆ. ಪ್ರಭಲಗೊಂಡರೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸುಳ್ಯದಲ್ಲಿ ಉದ್ಯೋಗಾವಕಾಶ – ನ.12ರಂದು ಬೃಹತ್ ಉದ್ಯೋಗಮೇಳ

ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ನವೆಂಬರ್ 12ರಂದು ಬೃಹತ್ ಉದ್ಯೋಗಮೇಳ ನಡೆಯಲಿದೆ. 50ಕ್ಕೂ ಹೆಚ್ಚು…

1 day ago

ಹಿಂಗಾರು ಬಿತ್ತನೆಗೆ ಹವಾಮಾನದ ಹೊಡೆತ – ದೇಶದಲ್ಲಿ ಶೇ.46ರಷ್ಟು ಕುಸಿತ, ಸಾಸಿವೆ-ಕಡಲೆ ಬಿತ್ತನೆ ಭಾರಿ ಇಳಿಕೆ – ಆಹಾರ ಹಣದುಬ್ಬರದ ಆತಂಕ

ದೇಶದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.46ರಷ್ಟು ಕುಸಿದಿದ್ದು,…

2 days ago

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ₹20,000 ಕೋಟಿ – ರಸ್ತೆ, ಸೇತುವೆ ಹಾಗೂ ಬೆಂಗಳೂರು ಸುತ್ತಮುತ್ತಲಿನ ಕಾಮಗಾರಿಗಳಿಗೆ ಆದ್ಯತೆ

ರಾಜ್ಯದಲ್ಲಿ ರಸ್ತೆ, ಸೇತುವೆ, ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ…

2 days ago

ಹವಾಮಾನ ವರದಿ | 08-11-2026 | ನ.11ರ ಹವಾಮಾನ ಬದಲಾವಣೆಯ ಮೇಲೆ ನಿಗಾ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಗುಡುಗು…

3 days ago

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…

4 days ago

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

4 days ago